ಕೋಮು ದ್ವೇಷ, ನೈತಿಕ ಪೊಲೀಸ್ ಗಿರಿ, ಜಾತಿ ಜಗಳ ಮುಂತಾದ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಹಿಂದಿನಿಂದಲೂ ಕೆಟ್ಟ ಹೆಸರು ಇದ್ದದ್ದೆ. ಯಾವುದೇ ಕ್ರಮಕ್ಕೂ ಈ ಕಿರಿ ಕಿರಿ ಜಗ್ಗಿದ್ದು ಅಷ್ಟಕಷ್ಟೇ.. ಈಗ ನೂತನವಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಸಚಿವ ದಿನೇಶ್ ಗುಂಡೂರಾವ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದೆ. ಅವರು ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದಾರೆ.
‘ಜಿಲ್ಲಾ ಉಸ್ತುವಾರಿ ನೀಡಿದ್ದಕ್ಕೆ ಖುಷಿಯಾಗಿದೆ. ಯೂತ್ ಕಾಂಗ್ರೆಸ್ ಸಮಯದಿಂದಲೂ ನಾನು ಇಲ್ಲಿಗೆ ಬರುತ್ತಿದ್ದೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಮೇಲೆ ಮೊದಲ ಬಾರಿಗೆ ಆಗಮಿಸಿದ ಅವರು ‘ಜಿಲ್ಲೆ ಜನರ ನಾಡಿಮಿಡಿತ ಸ್ವಲ್ಪವಾದರೂ ನನಗೆ ಗೊತ್ತಿದೆ. ದಕ್ಷಿಣ ಕನ್ನಡ ಈ ರಾಜ್ಯದ ಅತ್ಯಂತ ಪ್ರತಿಷ್ಠಿತ ಜಿಲ್ಲೆ. ಆಗಾಗ ಬಂದು ಜನರ ಜೊತೆ ಸಂಪರ್ಕದಲ್ಲಿ ಇರುತ್ತೇನೆ, ಅಭಿವೃದ್ಧಿ, ಯೋಜನೆಗಳ ಅನುಷ್ಠಾನಕ್ಕೆ ಪ್ರಥಮ ಆದ್ಯತೆ ನೀಡುತ್ತೇನೆ. ಜೊತೆಗೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಇರಬೇಕು. ಕಾನೂನು ಉಲ್ಲಂಘಿಸಿದವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದರು.
ಕೋಮುದ್ವೇಷ, ಪ್ರಚೋದಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: ಇನ್ನು ಜಿಲ್ಲೆಯಲ್ಲಿ ಕೋಮುದ್ವೇಷ, ಪ್ರಚೋದಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಗೃಹ ಸಚಿವರು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸುವುದಾಗಿ ಈಗಾಗಲೇ ಹೇಳಿದ್ದಾರೆ. ಇದು ದ್ವೇಷ ಸಾಧಿಸೋ ವಿಂಗ್ ಆಗಬಾರದು, ಸಾಮರಸ್ಯ ಕಾಪಾಡೋ ದಳ ಆಗಬೇಕು ಎಂದರು. ಇದೇ ವೇಳೆ ಬಿಜೆಪಿ ಅವಧಿಯಲ್ಲಿ ಕೆಲ ಸಂಘ ಸಂಸ್ಥೆಗಳಿಗೆ ಭೂಮಿ ಪರಭಾರೆ ವಿಚಾರ ‘ಭೂಮಿ ಹಂಚಿಕೆ ವೇಳೆ ಕೆಲ ಲೋಪದೋಷಗಳು ಆಗಿರುವ ಮಾಹಿತಿ ಇದೆ. ಕಂದಾಯ ಇಲಾಖೆ ಈ ಲೋಪದೋಷಗಳನ್ನು ಪರಿಶೀಲಿಸಿ ಸರಿಪಡಿಸಬೇಕು ಎಂದು ಮಂಗಳೂರಿನಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…