ಕೋಲಾರಮ್ಮ ಸ್ವಚ್ಛತಾ ಕಾರ್ಯಪಡೆ ಹಾಗೂ ನಗರಸಭೆ ಅಧಿಕಾರಿಗಳು ಮುಳಬಾಗಿಲು ನಗರದ ಹಲವು ಅಂಗಡಿ ಮಳಿಗೆಗಳ ಮೇಲೆ ದಾಳಿ ನಡೆಸಿ ಸುಮಾರು 320 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು 1 ಲಕ್ಷದ 700 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಹಿರಿಯ ಆರೋಗ್ಯ ನಿರೀಕ್ಷಕಿ ಪ್ರತಿಭಾ ಮಾತನಾಡಿ, ಕೋಲಾರ ನಗರದಲ್ಲಿ ಹಲವು ಬಾರಿ ಜಾಗೃತಿ, ಜಾಥಾ, ದಾಳಿ ಮತ್ತು ದಂಡ ವಿಧಿಸಿದರೂ ಪ್ಲಾಸ್ಟಿಕ್ ಬಳಕೆ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಪತ್ತೆಯಾದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

