Advertisement
MIRROR FOCUS

ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ

Share

ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಪೂರೈಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಈ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ದೇಶಾದ್ಯಂತ ನಕಲಿ ರಸಗೊಬ್ಬರಗಳು ಮತ್ತು ಸಹಾಯಧನ ಹೊಂದಿರುವ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಪತ್ರದಲ್ಲಿ ರಸಗೊಬ್ಬರಗಳ ಮಾರಾಟ ಮಾಡುವವರ ಪರವಾನಗಿ ರದ್ದುಪಡಿಸುವುದು ಸೇರಿದಂತೆ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.  ಎಲ್ಲ ರಾಜ್ಯಗಳು ಈ ಕುರಿತಂತೆ ರಾಜ್ಯವ್ಯಾಪಿ ಅಭಿಯಾನ ಪ್ರಾರಂಭಿಸಬೇಕು. ಸಾಂಪ್ರದಾಯಿಕ ರಸಗೊಬ್ಬರಗಳಿಗೆ ನ್ಯಾನೊ ಅಥವಾ ಜೈವಿಕ ರಸಗೊಬ್ಬರಗಳ ಹೆಸರು ನೀಡುವ ಮೂಲಕ ರೈತರಿಗೆ ತಪ್ಪು ಮಾಹಿತಿ ನೀಡುವುದನ್ನು ತಡೆಗಟ್ಟಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

8 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

9 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

9 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

19 hours ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

1 day ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

1 day ago