Advertisement
ಸುದ್ದಿಗಳು

ಸುಳ್ಳು ಸುದ್ದಿಗಳು ಹರಡುವವರ ವಿರುದ್ಧ ಕ್ರಮ | ದಕ್ಷಿಣ ಕನ್ನಡ ಪೊಲೀಸರಿಂದ ಎಚ್ಚರಿಕೆ

Share

ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಸಮಾಜದ ಶಾಂತಿಗೆ ಭಂಗ ತರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಎಚ್ಚರಿಕೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಕೋಮು ಸೌಹಾರ್ದತೆಗೆ ಮತ್ತು ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುವಂತಹ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಿರುವುದು ಕಂಡುಬಂದಿದೆ. ಇದರಲ್ಲಿ ಕೆಲವು ಕಿಡಿಗೇಡಿಗಳು, ವಿದ್ಯಾವಂತರು, ಸಂಘಟಕರು ಸಹ ಪಾಲುದಾರರಾಗಿರುವುದು ಗಮನಕ್ಕೆ ಬಂದಿದೆ. ಇದು ಜಿಲ್ಲೆಗೆ ಕಪ್ಪು ಚುಕ್ಕೆ ತರುವಂತಹ ವಿಷಯ. ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ಅವರು ಹೇಳಿದರು. ಸುಳ್ಳು ಸುದ್ದಿ ಅಥವಾ ಪ್ರಚೋದನಾಕಾರಿ ಸಂದೇಶಗಳನ್ನು ಜನತೆ ನಂಬಬಾರದು. ಅಂತಹ ಪೋಸ್ಟ್‌ಗಳಿಗೆ ಪ್ರತಿಕ್ರಿಯೆ ನೀಡದೇ ಇದ್ದಾಗ ಮಾತ್ರ ತಪ್ಪು ಸಂದೇಶ ರವಾನೆಯಾಗುವುದನ್ನು ತಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ, ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಅಥವಾ ಪೋಸ್ಟ್ ಹರಿಯಬಿಡುವ ಮೊದಲು, ಅದರ ನೈಜತೆಯನ್ನು ಪರಿಶೀಲಿಸಬೇಕು. ಸಮಾಜದಲ್ಲಿ ಶಾಂತಿ ಕಾಯ್ದುಕೊಳ್ಳಲು ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ಡಾ.ಅರುಣ್ ಕೆ. ಮನವಿ ಮಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

25 minutes ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

5 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

14 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

15 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

21 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

22 hours ago