ಅಕ್ರಮವಾಗಿ ಗೋಸಾಗಾಟದ ಪ್ರಕರಣ ಹೆಚ್ಚಳ | ಮರ್ಧಾಳದ ಬಳಿ ಗೋಸಾಗಾಟದ ವಾಹನಕ್ಕೆ ಪಾದಚಾರಿ ಬಲಿ | ಕೊಲ್ಲಮೊಗ್ರದ ವಿಡಿಯೋ ವೈರಲ್ ಪ್ರಕರಣ ಏನಾಯ್ತು….? |‌

March 31, 2024
1:47 PM
ಅಕ್ರಮವಾಗಿ ಗೋಸಾಗಾಣಿಕೆ ನಡೆಯುತ್ತಲಿದೆ. ಈಚೆಗೆ ಇಂತಹ ಪ್ರಕರಣ ಹೆಚ್ಚಾಗಿದೆ. ದ ಕ ಜಿಲ್ಲೆಯ ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಇಂತಹ ಅಕ್ರಮಗಳಿಗೆ ಸೂಕ್ತ ಕ್ರಮ ಅಗತ್ಯ ಇದೆ.

ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದು ಪಾದಚಾರಿ ಮರ್ಧಾಳ ನಿವಾಸಿ ವಿಠಲ ರೈ   ಎಂಬವರು ಶನಿವಾರ ಮೃತಪಟ್ಟಿದ್ದರು. ಈ ಪ್ರಕರಣ ಗಂಭೀರ ಹಂತಕ್ಕೆ ತಲುಪಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಭಾನುವಾರ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದು ತನಿಖೆ ನಡೆಸುತ್ತಿದ್ದಾರೆ.

ಮರ್ದಾಳ ಪೇಟೆಯಲ್ಲಿ ವಿಠಲ ರೈ ಯವರು ತನ್ನ ಕಾರನ್ನು ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಬಳಿಕ ಕಾರನ್ನು ಮರ್ಧಾಳದ ಮನೆಯೊಂದರ ಮುಂದೆ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.ಈ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಿದ್ದರು. ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದ್ದರು.

ಕಳೆದ ಕೆಲವು ಸಮಯಗಳಿಂದ ಅಕ್ರಮವಾಗಿ ಗೋಸಾಗಾಟ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಕಾವು ಪ್ರದೇಶದಲ್ಲೂ ಗೋಸಾಗಾಟ ಪತ್ತೆಯಾಗಿತ್ತು, ಅದಕ್ಕೂ ಮುನ್ನ ಕಬಕ ಬಳಿಯಲ್ಲೂ ಗೋಸಾಗಾಟ ಪ್ರಕರಣ ಪತ್ತೆಯಾಗಿತ್ತು. ಇನ್ನು ಗ್ರಾಮೀಣ ಭಾಗದಲ್ಲಿ ಕೂಡಾ ಗೋಹತ್ಯೆ ನಡೆಸುವ ವಿಡಿಯೋ ವೈರಲ್‌ ಆಗಿತ್ತು. ಆದರೂ ಯಾವುದೇ ಕ್ರಮವಾಗಿರಲಿಲ್ಲ.  ಗ್ರಾಮೀಣ ಭಾಗವಾದ ಕೊಲ್ಲಮೊಗ್ರದಲ್ಲಿ ಗೋವನ್ನು ಹತ್ಯೆ ನಡೆಸಿದ ವಿಡಿಯೋ ಅದಾಗಿದೆ ಎಂದೂ ಹೇಳಲಾಗಿತ್ತು. ಆದರೂ ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯೇ ಆಗಿರಲಿಲ್ಲ. ಆರೋಪಿಗಳ ಬಗ್ಗೆಯೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ ಕಡಬದ ಮರ್ಧಾಳದ ಪ್ರಕರಣವು ಗಂಭೀರ ಸ್ವರೂಪ ಪಡೆದಿದೆ. ಇಲಾಖೆಗಳು ಈ ಬಗ್ಗೆ ಎಚ್ಚರಿಕೆ ವಹಿಸಬೇಕಾದ ಅಗತ್ಯ ಇದೆ.

ಕೊಲ್ಲಮೊಗ್ರದಲ್ಲಿ ನಡೆದಿದೆ ಎನ್ನಲಾದ ಗೋಹತ್ಯೆಯ ವಿಡಿಯೋ ವೈರಲ್
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror