ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದು ಪಾದಚಾರಿ ಮರ್ಧಾಳ ನಿವಾಸಿ ವಿಠಲ ರೈ ಎಂಬವರು ಶನಿವಾರ ಮೃತಪಟ್ಟಿದ್ದರು. ಈ ಪ್ರಕರಣ ಗಂಭೀರ ಹಂತಕ್ಕೆ ತಲುಪಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಭಾನುವಾರ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದು ತನಿಖೆ ನಡೆಸುತ್ತಿದ್ದಾರೆ.
ಮರ್ದಾಳ ಪೇಟೆಯಲ್ಲಿ ವಿಠಲ ರೈ ಯವರು ತನ್ನ ಕಾರನ್ನು ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಬಳಿಕ ಕಾರನ್ನು ಮರ್ಧಾಳದ ಮನೆಯೊಂದರ ಮುಂದೆ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.ಈ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಿದ್ದರು. ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದ್ದರು.
ಕಳೆದ ಕೆಲವು ಸಮಯಗಳಿಂದ ಅಕ್ರಮವಾಗಿ ಗೋಸಾಗಾಟ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಕಾವು ಪ್ರದೇಶದಲ್ಲೂ ಗೋಸಾಗಾಟ ಪತ್ತೆಯಾಗಿತ್ತು, ಅದಕ್ಕೂ ಮುನ್ನ ಕಬಕ ಬಳಿಯಲ್ಲೂ ಗೋಸಾಗಾಟ ಪ್ರಕರಣ ಪತ್ತೆಯಾಗಿತ್ತು. ಇನ್ನು ಗ್ರಾಮೀಣ ಭಾಗದಲ್ಲಿ ಕೂಡಾ ಗೋಹತ್ಯೆ ನಡೆಸುವ ವಿಡಿಯೋ ವೈರಲ್ ಆಗಿತ್ತು. ಆದರೂ ಯಾವುದೇ ಕ್ರಮವಾಗಿರಲಿಲ್ಲ. ಗ್ರಾಮೀಣ ಭಾಗವಾದ ಕೊಲ್ಲಮೊಗ್ರದಲ್ಲಿ ಗೋವನ್ನು ಹತ್ಯೆ ನಡೆಸಿದ ವಿಡಿಯೋ ಅದಾಗಿದೆ ಎಂದೂ ಹೇಳಲಾಗಿತ್ತು. ಆದರೂ ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯೇ ಆಗಿರಲಿಲ್ಲ. ಆರೋಪಿಗಳ ಬಗ್ಗೆಯೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ ಕಡಬದ ಮರ್ಧಾಳದ ಪ್ರಕರಣವು ಗಂಭೀರ ಸ್ವರೂಪ ಪಡೆದಿದೆ. ಇಲಾಖೆಗಳು ಈ ಬಗ್ಗೆ ಎಚ್ಚರಿಕೆ ವಹಿಸಬೇಕಾದ ಅಗತ್ಯ ಇದೆ.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…