ಮಳೆಯಿಂದ ಹಾನಿಗೀಡಾದ 100 ಶಾಲಾ ಕಟ್ಟಡ ಮರುನಿರ್ಮಾಣಕ್ಕೆ ಕ್ರಮ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭರವಸೆ

August 28, 2025
6:54 AM

ಧಾರವಾಡ ಜಿಲ್ಲೆಯಲ್ಲಿ 330 ಕ್ಕೂ ಅಧಿಕ ಶಾಲಾ ಕಟ್ಟಡಗಳು ಮಳೆಯಿಂದಾಗಿ ಹಾನಿಗೀಡಾಗಿದ್ದು, ಈ ಪೈಕಿ 100 ಶಾಲಾ ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ  ಅಧಿಕಾರಿಗಳೊಂದಿಗೆ ಮಳೆಹಾನಿ ಬಗ್ಗೆ ಚರ್ಚೆ ನಡೆಸಿದ ಅವರು, ಸಿಎಸ್‌ಆರ್ ಯೋಜನೆಯಡಿ ನೂರು ಶಾಲಾ ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಪ್ರಸ್ತಾವನೆ ನೀಡಿದ್ದಾಗಿ ನೀಡಿದ್ದಾರೆ. ಇನ್ನುಳಿದ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕು. ಕೂಡಲೇ ಅನುದಾನ ಒದಗಿಸಿ ಕಟ್ಟಡ ನಿರ್ಮಾಣ ಮಾಡಬೇಕೆಂದು ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ.  ಫಸಲ್ ಬಿಮಾ ಯೋಜನೆಯಡಿಯಲ್ಲಿ ಸ್ಥಳೀಯ ವಿಪತ್ತು ಸಮೀಕ್ಷೆ ಪೂರ್ಣಗೊಳಿಸಿ ತ್ವರಿತವಾಗಿ ಸಂಬಂಧಪಟ್ಟ ಬೆಳೆವಿಮಾ ಕಂಪನಿಗೆ ವರದಿ ನೀಡಬೇಕು. ಮಳೆ ಹಾನಿಗೊಳಗಾದ ರೈತರಿಗೆ ಕೂಡಲೇ ಪರಿಹಾರ ದೊರಕಿಸಿಕೊಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಅತಿ ಹೆಚ್ಚು ಮಳೆ ಸುರಿದಿದ್ದು, ನೂರಾರು ಮನೆ, ಹೊಲ ಹಾಗೂ ಶಾಲಾ ಕಟ್ಟಡಗಳು ಹಾನಿಗೊಳಗಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror