ಧಾರವಾಡ ಜಿಲ್ಲೆಯಲ್ಲಿ 330 ಕ್ಕೂ ಅಧಿಕ ಶಾಲಾ ಕಟ್ಟಡಗಳು ಮಳೆಯಿಂದಾಗಿ ಹಾನಿಗೀಡಾಗಿದ್ದು, ಈ ಪೈಕಿ 100 ಶಾಲಾ ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಅಧಿಕಾರಿಗಳೊಂದಿಗೆ ಮಳೆಹಾನಿ ಬಗ್ಗೆ ಚರ್ಚೆ ನಡೆಸಿದ ಅವರು, ಸಿಎಸ್‌ಆರ್ ಯೋಜನೆಯಡಿ ನೂರು ಶಾಲಾ ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಪ್ರಸ್ತಾವನೆ ನೀಡಿದ್ದಾಗಿ ನೀಡಿದ್ದಾರೆ. ಇನ್ನುಳಿದ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕು. ಕೂಡಲೇ ಅನುದಾನ ಒದಗಿಸಿ ಕಟ್ಟಡ ನಿರ್ಮಾಣ ಮಾಡಬೇಕೆಂದು ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ. ಫಸಲ್ ಬಿಮಾ ಯೋಜನೆಯಡಿಯಲ್ಲಿ ಸ್ಥಳೀಯ ವಿಪತ್ತು ಸಮೀಕ್ಷೆ ಪೂರ್ಣಗೊಳಿಸಿ ತ್ವರಿತವಾಗಿ ಸಂಬಂಧಪಟ್ಟ ಬೆಳೆವಿಮಾ ಕಂಪನಿಗೆ ವರದಿ ನೀಡಬೇಕು. ಮಳೆ ಹಾನಿಗೊಳಗಾದ ರೈತರಿಗೆ ಕೂಡಲೇ ಪರಿಹಾರ ದೊರಕಿಸಿಕೊಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಅತಿ ಹೆಚ್ಚು ಮಳೆ ಸುರಿದಿದ್ದು, ನೂರಾರು ಮನೆ, ಹೊಲ ಹಾಗೂ ಶಾಲಾ ಕಟ್ಟಡಗಳು ಹಾನಿಗೊಳಗಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…