ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

March 17, 2025
7:02 AM
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ.  ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ.  ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರೆ ವೈದ್ಯಕೀಯ ಸಂಸ್ಥೆಗಳಲ್ಲಿ ಇಂತಹ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.………ಮುಂದೆ ಓದಿ……..

Advertisement

ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗಿದೆ. ಇಂತಹ ಅಮಾನವೀಯ ಕೃತ್ಯಗಳನ್ನು ತಡೆಯಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಸಚಿವರು ಹೇಳಿದರು.

ಡಾ. ಶರಣ್ ಪ್ರಕಾಶ್ ಪಾಟೀಲ್

ಈ ಕುರಿತು ಕಳವಳ ವ್ಯಕ್ತಪಡಿಸಿರುವ  ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಈ ಕುರಿತ ಪ್ರಕರಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಶಿಕ್ಷಣ ನಿರ್ದೇಶಕರು, ಕಂದಾಯ ಉಪವಿಭಾಗದ ಸಹಾಯಕ ಆಯುಕ್ತರಿಗೆ ದೂರು ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.  ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007 ರ ಸೆಕ್ಷನ್ 23 ರ ಪ್ರಕಾರ, ಮಕ್ಕಳು ಆಸ್ತಿಯನ್ನು ಆನುವಂಶಿಕವಾಗಿ ಪಡೆದ ನಂತರ ಹೆತ್ತವರನ್ನು ನಿರ್ಲಕ್ಷಿಸಿದರೆ ಅಥವಾ ತ್ಯಜಿಸಿದರೆ, ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ವಯಸ್ಸಾದ ಪೋಷಕರಿಗೆ ಮಾಲೀಕತ್ವವನ್ನು ಪುನಃ ಪಡೆಯಲು ಕಾಯ್ದೆಯಲ್ಲಿ ಅನುಮತಿ ಇದೆ ಎಂದು ಸಚಿವರು ಹೇಳಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ
April 23, 2025
3:13 PM
by: ಸಾಯಿಶೇಖರ್ ಕರಿಕಳ
ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾವು ಮಾರಾಟ | ಅಂಚೆ ಇಲಾಖೆಯಿಂದ 6 ವರ್ಷಗಳಿಂದ ಯಶಸ್ವಿ | ದೆಹಲಿಯವರೆಗೂ ಮಾವಿನಹಣ್ಣು ರವಾನೆ |
April 23, 2025
11:24 AM
by: ದ ರೂರಲ್ ಮಿರರ್.ಕಾಂ
ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!
April 23, 2025
8:13 AM
by: ದ ರೂರಲ್ ಮಿರರ್.ಕಾಂ
ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ
April 22, 2025
9:35 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group