ರಾಜ್ಯದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರೆ ವೈದ್ಯಕೀಯ ಸಂಸ್ಥೆಗಳಲ್ಲಿ ಇಂತಹ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.………ಮುಂದೆ ಓದಿ……..
ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗಿದೆ. ಇಂತಹ ಅಮಾನವೀಯ ಕೃತ್ಯಗಳನ್ನು ತಡೆಯಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಸಚಿವರು ಹೇಳಿದರು.
ಈ ಕುರಿತು ಕಳವಳ ವ್ಯಕ್ತಪಡಿಸಿರುವ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಈ ಕುರಿತ ಪ್ರಕರಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಶಿಕ್ಷಣ ನಿರ್ದೇಶಕರು, ಕಂದಾಯ ಉಪವಿಭಾಗದ ಸಹಾಯಕ ಆಯುಕ್ತರಿಗೆ ದೂರು ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007 ರ ಸೆಕ್ಷನ್ 23 ರ ಪ್ರಕಾರ, ಮಕ್ಕಳು ಆಸ್ತಿಯನ್ನು ಆನುವಂಶಿಕವಾಗಿ ಪಡೆದ ನಂತರ ಹೆತ್ತವರನ್ನು ನಿರ್ಲಕ್ಷಿಸಿದರೆ ಅಥವಾ ತ್ಯಜಿಸಿದರೆ, ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ವಯಸ್ಸಾದ ಪೋಷಕರಿಗೆ ಮಾಲೀಕತ್ವವನ್ನು ಪುನಃ ಪಡೆಯಲು ಕಾಯ್ದೆಯಲ್ಲಿ ಅನುಮತಿ ಇದೆ ಎಂದು ಸಚಿವರು ಹೇಳಿದರು.
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…
21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ…