ಕಳೆದ ಎರಡು ವರ್ಷಗಳಲ್ಲಿ ವಿಮಾನದ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಮಾಡಿದ 16 ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಈ ಮೂಲಕ ₹1.08 ಕೋಟಿ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದೆ ಎಂದು ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ವಿ.ಕೆ. ಸಿಂಗ್ ಲೋಕಸಭೆಯಲ್ಲಿ ಪ್ರಶೋತ್ತರ ಅವಧಿಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲು ಹಾಗೂ ಡಿ.ಕೆ. ಸುರೇಶ್ ಕೇಳಿರುವ ಪ್ರಶ್ನೆಗೆ ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ವಿ.ಕೆ. ಸಿಂಗ್ ಈ ಉತ್ತರ ನೀಡಿದ್ದಾರೆ. ಈಗ ಇನ್ನಷ್ಟು ಬಿಗು ಕ್ರಮ ಕೈಗೊಳ್ಳಲಾಗಿದ್ದು ನವೆಂಬರ್ ತಿಂಗಳಿನ ತನಕ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ತನಿಖಾ ತಂಡವು ಅಡಿಕೆಯ ಅಕ್ರಮ ಸಾಗಣೆ ಮೇಲೆ ನನ ನಿಗಾ ಇಟ್ಟಿದೆ. ದೇಶದ ರೈತರ ಹಿತ ರಕ್ಷಿಸಲು ಬದ್ಧವಾಗಿದೆ ಎಂದು ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ವಿ.ಕೆ. ಸಿಂಗ್ ಅವರು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel