Advertisement
MIRROR FOCUS

ಹುರಿದ ಅಡಿಕೆ ಆಮದು ತಡೆಗೆ ಕ್ರಮ – ಕ್ಯಾಂಪ್ಕೋ ಶ್ಲಾಘನೆ

Share

ಅಡಿಕೆ ಆಮದು ತಡೆಯ ನಿಟ್ಟಿನಲ್ಲಿ ಡಿಜಿಎಫ್‌ಟಿ(DGFT) ಹುರಿದ ಅಡಿಕೆಯ ನೆಪದಲ್ಲಿ ಬರುವ ಅನಿರ್ಬಂಧಿತ ವಿದೇಶಿ ವ್ಯಾಪಾರವನ್ನು  ರದ್ದು ಮಾಡಿದೆ. ಈ ಮೂಲಕ “ರೋಸ್ಟೆಡ್‌ ನಟ್‌ ಸೀಡ್ಸ್”‌ ಅಡಿಯಲ್ಲಿ ಆಮದಾಗುತ್ತಿದ್ದ ಅಡಿಕೆಗೆ ನಿರ್ಬಂಧವಾಗಿದೆ. ಕೇಂದ್ರ ಸರ್ಕಾರದ ಈ ಕ್ರಮಕ್ಕೆ ಕ್ಯಾಂಪ್ಕೋ ಅಧ್ಯಕ್ಷ ಕಿಶೊರ್‌ ಕುಮಾರ್‌ ಕೊಡ್ಗಿ ಶ್ಲಾಘಿಸಿದ್ದಾರೆ.……..ಮುಂದೆ ಓದಿ…..

ಎಪ್ರಿಲ್‌ 2 ರಂದು ಕೇಂದ್ರ ಸರ್ಕಾರದ ವಾಣಿಜ್ಯ ಇಲಾಖೆಯು ಅಧಿಸೂಚನೆ  ಹೊರಡಿಸಿದೆ. ಅದರ ಪ್ರಕಾರ HS code 08028090 ಮತ್ತು 20081920 ಅಡಿಯಲ್ಲಿ ಬರುವ “ಹುರಿದ ಅಡಿಕೆ”ಯನ್ನು “ಉಚಿತ”  ಆಮದಿನಿಂದ “ನಿಷೇಧಿತ” ಎಂದು ಪರಿಷ್ಕರಿಸಿ ವರ್ಗೀಕರಿಸಲಾಗಿದೆ. ಇದರ ಜೊತೆಗೆ ಕನಿಷ್ಠ ಆಮದು ದರವನ್ನು ಪ್ರತೀ ಕೆಜಿಗೆ ರೂ 351 ನಿಗದಿಪಡಿಸಿದೆ.  ಹೀಗಾಗಿ ಈ ಸಂಖ್ಯೆಯಡಿಯಲ್ಲಿಎಲ್ಲಾ ರೀತಿಯ ಸಂಸ್ಕರಿತ ಅಡಿಕೆಯನ್ನು ಸೇರಿಸಲಾಗಿದ್ದು, ಈಗ ಹುರಿದ ಅಡಿಕೆಯು ಸಹ ಸೇರ್ಪಡೆಗೊಂಡಿದೆ. ಕೆಲವು ತಿಂಗಳುಗಳ ಹಿಂದೆ ಹುರಿದ ಅಡಿಕೆ ಹೆಚ್ಚಿನ ಪ್ರಮಾಣದಲ್ಲಿ ಭಾರತದ ಮಾರುಕಟ್ಟೆಗೆ ಬಂದಿದ್ದರ ಪರಿಣಾಮ ಪಠೋರ ಮತ್ತಿತರ ಕೆಳದರ್ಜೆಯ ಅಡಿಕೆಯ ದರ ಕಡಿಮೆಯಾಗಿರುವುದಲ್ಲದೇ ಬೇಡಿಕೆ ಕುಂಠಿತವಾಗಿದ್ದನ್ನು ಗಮನಿಸಬಹುದಾಗಿದೆ ಎಂದು ಕ್ಯಾಂಪ್ಕೋ ಪ್ರಕಟಣೆಯಲ್ಲಿ ತಿಳಿಸಿದೆ.

To reduce arecanut imports, the DGFT has revoked the unrestricted foreign trade classification for roasted arecanut, effectively banning its import under the “roasted nut seeds” category. Campco President Kishore Kumar Kodgi has commended the central government for this decision.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

22 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

23 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

23 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

2 days ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago