ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |

February 7, 2025
7:10 AM
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ಮೊಬೈಲ್ ಟವರ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಕೇಂದ್ರ ದೂರಸಂಪರ್ಕ  ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

ಪ್ರಧಾನಮಂತ್ರಿ ಜನ ಮನ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ, ಬುಡಕಟ್ಟು ಜನಸಂಖ್ಯಾ ಬಹುಳ್ಯವಿರುವ ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ ಕೈಗೊಂಡಿದೆ ಎಂದು ಕೇಂದ್ರ ದೂರಸಂಪರ್ಕ  ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.……… ಮುಂದೆ ಓದಿ…….

ಪ್ರಶ್ನೋತ್ತರ ಕಲಾಪದಲ್ಲಿ ಅವರು,  ಶಿಕ್ಷಣ, ಆರೋಗ್ಯ ಹಾಗೂ ಸಂಪರ್ಕಗಳನ್ನು ಒಳಗೊಂಡ ಸಮಗ್ರ ವಿಕಾಸಕ್ಕೆ ಆದ್ಯತೆ ನೀಡುತ್ತಿದೆ. ಇದಕ್ಕಾಗಿ 24 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದ್ದು, 15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ಮೊಬೈಲ್ ಟವರ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಇದುವರೆಗೆ 900ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್ ಟವರ್ ಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.  ಕಳೆದ 10 ವರ್ಷಗಳಲ್ಲಿ ದೇಶದ ದೂರಸಂಪರ್ಕ ವಲಯದಲ್ಲಿ ಕ್ರಾಂತಿಯುಂಟಾಗಿದೆ. ಮೊಬೈಲ್ ಸಂಪರ್ಕ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದ್ದು, ಪ್ರಸ್ತುತ ದೇಶದಲ್ಲಿ 116 ಕೋಟಿ ಮೊಬೈಲ್ ಸಂಪರ್ಕ ಸೇವೆ ಹೊಂದಿರುವ ಗ್ರಾಹಕರಿದ್ದಾರೆ. ಭಾರತದಲ್ಲಿ ವಿಶ್ವದಲ್ಲೇ ಅತಿ ಕಡಿಮೆ ದರಕ್ಕೆ ಮೊಬೈಲ್ ಸೇವೆ ಲಭ್ಯವಾಗುತ್ತಿದೆ ಎಂದು ತಿಳಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror