ಪ್ರಧಾನಮಂತ್ರಿ ಜನ ಮನ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ, ಬುಡಕಟ್ಟು ಜನಸಂಖ್ಯಾ ಬಹುಳ್ಯವಿರುವ ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ ಕೈಗೊಂಡಿದೆ ಎಂದು ಕೇಂದ್ರ ದೂರಸಂಪರ್ಕ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.……… ಮುಂದೆ ಓದಿ…….
ಪ್ರಶ್ನೋತ್ತರ ಕಲಾಪದಲ್ಲಿ ಅವರು, ಶಿಕ್ಷಣ, ಆರೋಗ್ಯ ಹಾಗೂ ಸಂಪರ್ಕಗಳನ್ನು ಒಳಗೊಂಡ ಸಮಗ್ರ ವಿಕಾಸಕ್ಕೆ ಆದ್ಯತೆ ನೀಡುತ್ತಿದೆ. ಇದಕ್ಕಾಗಿ 24 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದ್ದು, 15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ಮೊಬೈಲ್ ಟವರ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಇದುವರೆಗೆ 900ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್ ಟವರ್ ಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು. ಕಳೆದ 10 ವರ್ಷಗಳಲ್ಲಿ ದೇಶದ ದೂರಸಂಪರ್ಕ ವಲಯದಲ್ಲಿ ಕ್ರಾಂತಿಯುಂಟಾಗಿದೆ. ಮೊಬೈಲ್ ಸಂಪರ್ಕ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದ್ದು, ಪ್ರಸ್ತುತ ದೇಶದಲ್ಲಿ 116 ಕೋಟಿ ಮೊಬೈಲ್ ಸಂಪರ್ಕ ಸೇವೆ ಹೊಂದಿರುವ ಗ್ರಾಹಕರಿದ್ದಾರೆ. ಭಾರತದಲ್ಲಿ ವಿಶ್ವದಲ್ಲೇ ಅತಿ ಕಡಿಮೆ ದರಕ್ಕೆ ಮೊಬೈಲ್ ಸೇವೆ ಲಭ್ಯವಾಗುತ್ತಿದೆ ಎಂದು ತಿಳಿಸಿದರು.
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…