ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕ್ರಮ | ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ

May 2, 2025
8:50 PM

ಹಾಸನ ಜಿಲ್ಲೆ ಸಕಲೇಶಪುರ ಬಳಿಯ ಬೈಕೆರೆ ಗ್ರಾಮದಲ್ಲಿ ಇತ್ತೀಚಿಗೆ ಆನೆ ದಾಳಿಯಿಂದ ಮೃತಪಟ್ಟ ಷಣ್ಮುಖ ನಿವಾಸಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.  ಈ ಸಂದರ್ಭದಲ್ಲಿ  ಬಿಕ್ಕೋಡಿಯಲ್ಲಿ ಆನೆ  ಕಾರ್ಯಪಡೆಯ ಘಟಕ ಸ್ಥಾಪಿಸಿ ಸ್ಥಳೀಯರಿಗೆ ಆನೆಗಳ ಚಲನವಲನದ ಬಗ್ಗೆ ಸೂಕ್ತ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Advertisement
Advertisement

ಈ ಸಂದರ್ಭ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಸಕಲೇಶಪುರ, ಬೇಲೂರು ಸುತ್ತಮುತ್ತ  ಆನೆ ದಾಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೆಲವು ರೈತರು ತಮ್ಮ ಜಮೀನನ್ನೇ ಅರಣ್ಯ ಇಲಾಖೆಗೆ ಮಾರಾಟ ಮಾಡಲು ಮುಂದಾಗಿದ್ದು, ಈ ಜಮೀನು ಖರೀದಿಸಿ ಅರಣ್ಯ ವಿಸ್ತರಣೆ ಮಾಡಿ ಆನೆ ಹಾವಳಿ ತಡೆಗೆ ಪರಿಶೀಲಿಸುವುದಾಗಿ ತಿಳಿಸಿದರು. ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಶಾಶ್ವತ ಕ್ರಮ ಕೈಗೊಳ್ಳಲು ಸರ್ಕಾರ ಸಕಲ ಪ್ರಯತ್ನ ಮಾಡುತ್ತಿದೆ. ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ಕರೆಯಲು ಮನವಿ ಮಾಡಲಾಗಿದೆ ಎಂದರು.

ಈ ವೇಳೆ ಸಂಸದ ಶ್ರೇಯಸ್ ಪಟೇಲ್, ಶಾಸಕ ಸಿಮೆಂಟ್ ಮಂಜು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Click And Follow the The Rural Mirror.com WhatsApp channel

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ
May 23, 2025
7:30 AM
by: ದ ರೂರಲ್ ಮಿರರ್.ಕಾಂ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್
May 22, 2025
9:50 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group