ಹಾಸನ ಜಿಲ್ಲೆ ಸಕಲೇಶಪುರ ಬಳಿಯ ಬೈಕೆರೆ ಗ್ರಾಮದಲ್ಲಿ ಇತ್ತೀಚಿಗೆ ಆನೆ ದಾಳಿಯಿಂದ ಮೃತಪಟ್ಟ ಷಣ್ಮುಖ ನಿವಾಸಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಬಿಕ್ಕೋಡಿಯಲ್ಲಿ ಆನೆ ಕಾರ್ಯಪಡೆಯ ಘಟಕ ಸ್ಥಾಪಿಸಿ ಸ್ಥಳೀಯರಿಗೆ ಆನೆಗಳ ಚಲನವಲನದ ಬಗ್ಗೆ ಸೂಕ್ತ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಸಕಲೇಶಪುರ, ಬೇಲೂರು ಸುತ್ತಮುತ್ತ ಆನೆ ದಾಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೆಲವು ರೈತರು ತಮ್ಮ ಜಮೀನನ್ನೇ ಅರಣ್ಯ ಇಲಾಖೆಗೆ ಮಾರಾಟ ಮಾಡಲು ಮುಂದಾಗಿದ್ದು, ಈ ಜಮೀನು ಖರೀದಿಸಿ ಅರಣ್ಯ ವಿಸ್ತರಣೆ ಮಾಡಿ ಆನೆ ಹಾವಳಿ ತಡೆಗೆ ಪರಿಶೀಲಿಸುವುದಾಗಿ ತಿಳಿಸಿದರು. ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಶಾಶ್ವತ ಕ್ರಮ ಕೈಗೊಳ್ಳಲು ಸರ್ಕಾರ ಸಕಲ ಪ್ರಯತ್ನ ಮಾಡುತ್ತಿದೆ. ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ಕರೆಯಲು ಮನವಿ ಮಾಡಲಾಗಿದೆ ಎಂದರು.
ಈ ವೇಳೆ ಸಂಸದ ಶ್ರೇಯಸ್ ಪಟೇಲ್, ಶಾಸಕ ಸಿಮೆಂಟ್ ಮಂಜು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Click And Follow the The Rural Mirror.com WhatsApp channel 12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…