ಹಾಸನ ಜಿಲ್ಲೆ ಸಕಲೇಶಪುರ ಬಳಿಯ ಬೈಕೆರೆ ಗ್ರಾಮದಲ್ಲಿ ಇತ್ತೀಚಿಗೆ ಆನೆ ದಾಳಿಯಿಂದ ಮೃತಪಟ್ಟ ಷಣ್ಮುಖ ನಿವಾಸಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಬಿಕ್ಕೋಡಿಯಲ್ಲಿ ಆನೆ ಕಾರ್ಯಪಡೆಯ ಘಟಕ ಸ್ಥಾಪಿಸಿ ಸ್ಥಳೀಯರಿಗೆ ಆನೆಗಳ ಚಲನವಲನದ ಬಗ್ಗೆ ಸೂಕ್ತ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಸಕಲೇಶಪುರ, ಬೇಲೂರು ಸುತ್ತಮುತ್ತ ಆನೆ ದಾಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೆಲವು ರೈತರು ತಮ್ಮ ಜಮೀನನ್ನೇ ಅರಣ್ಯ ಇಲಾಖೆಗೆ ಮಾರಾಟ ಮಾಡಲು ಮುಂದಾಗಿದ್ದು, ಈ ಜಮೀನು ಖರೀದಿಸಿ ಅರಣ್ಯ ವಿಸ್ತರಣೆ ಮಾಡಿ ಆನೆ ಹಾವಳಿ ತಡೆಗೆ ಪರಿಶೀಲಿಸುವುದಾಗಿ ತಿಳಿಸಿದರು. ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಶಾಶ್ವತ ಕ್ರಮ ಕೈಗೊಳ್ಳಲು ಸರ್ಕಾರ ಸಕಲ ಪ್ರಯತ್ನ ಮಾಡುತ್ತಿದೆ. ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ಕರೆಯಲು ಮನವಿ ಮಾಡಲಾಗಿದೆ ಎಂದರು.
ಈ ವೇಳೆ ಸಂಸದ ಶ್ರೇಯಸ್ ಪಟೇಲ್, ಶಾಸಕ ಸಿಮೆಂಟ್ ಮಂಜು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Click And Follow the The Rural Mirror.com WhatsApp channel ಮಿಜೋರಾಂನ ಚಂಫೈ ಜಿಲ್ಲೆಯಲ್ಲಿ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು, ಮ್ಯಾನ್ಮಾರ್ ಪ್ರಜೆಯೊಬ್ಬ ಸೇರಿದಂತೆ ನಾಲ್ವರನ್ನು…
ಚಾಮರಾಜನಗರ ಜಿಲ್ಲೆ ಬರಪೀಡಿತ ಎಂದು ಘೋಷಣೆಯಾದ ಹಿನ್ನೆಲೆಯಲ್ಲಿ ಅರ್ಹ ಬೆಳೆ ಸಾಲ ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿಮ್ಮೋಜನಹಳ್ಳಿ ಗ್ರಾಮದ ಸಮೀಪ ಶುಕ್ರವಾರ ಬೆಳಿಗ್ಗೆ…
ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ…
ಕೊಪ್ಪಳ ಜಿಲ್ಲೆಯ ತುಂಬರಗುದ್ದಿ ಗ್ರಾಮದ ಮಂಜುನಾಥ್ ರಾಮಪ್ಪ ಇಳಿಗೆರ್ ಅವರು ಕಿರಾಣಿ ಅಂಗಡಿಯಿಂದ…
ಕಾಡಿನಲ್ಲಿ ಸಮಯ ಕಳೆಯುವುದು ಮಾನಸಿಕ ಒತ್ತಡ ಕಡಿಮೆ ಮಾಡಲು ಮತ್ತು ದೇಹದ ರೋಗನಿರೋಧಕ…