ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಯುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲೂಕಿನ ಬಿ.ವಿ.ಹಳ್ಳಿಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ರೈತರೊಂದಿಗೆ ಸಮಾಲೋಚನೆ ನಡೆಸಿದರು.
ಮಾನವ- ಪ್ರಾಣಿ ಸಂಘರ್ಷ ಹೆಚ್ಚಾಗುತ್ತಿರುವುದು ಆತಂಕಕಾರಿ ಘಟನೆ. ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಈಗಾಗಲೇ 60 ಕೋಟಿ ರೂಪಾಯಿ ವೆಚ್ಚದಲ್ಲಿ 35 ಕಿಲೋಮೀಟರ್ ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾರ್ಯ ಶೇಕಡ 75ರಷ್ಟು ಪೂರ್ಣಗೊಂಡಿದೆ. ಜೊತೆಗೆ ಆನೆ ಕಾರ್ಯಪಡೆ ರಚಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು. ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಆನೆ ವಿಹಾರಧಾಮ ಮಾಡುವ ಪ್ರಸ್ತಾವನೆಯಿದೆ. ಇದಕ್ಕಾಗಿ 300 ಕೋಟಿ ರೂಪಾಯಿ ವೆಚ್ಚದ ಯೋಜನಾ ವರದಿ ಸಿದ್ಧಪಡಿಸಿದ್ದು, ಈ ಬಾರಿಯ ಮುಂಗಡಪತ್ರದಲ್ಲೇ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲೆಯ ನಿಯೋಗ ಮನವಿ ಮಾಡಲು ನಿರ್ಧರಿಸಲಾಗಿದೆ ಎಂದರು.
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…