ಗೋಮಾಳ, ಕೆರೆ ಜಾಗ ಸೇರಿದಂತೆ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಮೀನನ್ನು ತೆರವುಗೊಳಿಸಲು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಟಿ. ಎ.ಶರವಣ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸರ್ಕಾರಿ ಜಮೀನನ್ನು ಎಲ್ಲೆಲ್ಲಿ ಒತ್ತುವರಿ ಮಾಡಲಾಗಿದೆ ಎಂಬುದನ್ನು ಗುರುತಿಸಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಸರ್ಕಾರಿ ಜಮೀನು ಒತ್ತುವರಿ ತೆರವು ಗೊಳಿಸುವ ಸಂಬಂಧ ಪ್ರತಿ ತಾಲ್ಲೂಕಿನಲ್ಲಿ ವಾರಕ್ಕೆ ಎರಡು ಬಾರಿ ಕಾರ್ಯಾಚರಣೆ ನಡೆಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಸರಕಾರಿ ಜಮೀನಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೇರೆಯವರಿಗೆ ಮಾರಾಟ ಮಾಡಲು ಅವಕಾಶವಿಲ್ಲದಂತೆ ಕಾನೂನು ಜಾರಿಗೊಳಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel