ಕನ್ನಡದ ಅಮೃತವರ್ಷಿಣಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು ಇಂದು ಹೈದರಾಬಾದ್ನಲ್ಲಿ ಕೊನೆ ಉಸಿರೆಳೆದಿದ್ದಾರೆ.
ಅವರಿಗೆ 71 ವರ್ಷ ವಯಸ್ಸಾಗಿತ್ತು. ಏಪ್ರಿಲ್ನ ಮೊದಲ ವಾರದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ತುಸು ಚೇತರಿಸಿಕೊಂಡ ಬಳಿಕ ಅವರನ್ನು ಹೈದರಾಬಾದ್ಗೆ ಕರೆದೊಯ್ಯಲಾಗಿತ್ತು. ಅದಾದ ಬಳಿಕ ಅಲ್ಲಿ ಮತ್ತೆ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಏಪ್ರಿಲ್ 20 ರ ಸುಮಾರಿಗೆ ಹೈದರಾಬಾದ್ನ ಗಚ್ಚಿಬೌಲಿಯ ಎಐಜಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಐಸಿಯು ವಾರ್ಡ್ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ವೈದ್ಯರ ಸತತ ಪ್ರಯತ್ನಗಳು ಫಲನೀಡದೆ ಶರತ್ ಬಾಬು ಇಹಲೋಕ ತ್ಯಜಿಸಿದ್ದಾರೆಹಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel