ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಆರಂಭಿಸಿದೆ. ಹಬ್ಬದ ವೇಳೆ ವಾರಾಂತ್ಯವು ಒಟ್ಟಾಗಿ ಬಂದಿರುವುದರಿಂದ ರಾಜ್ಯ ಮತ್ತು ಅಂತಾರಾಜ್ಯ ಪ್ರಯಾಣಿಕರ ದಟ್ಟಣೆ ನಿರ್ವಹಣೆಗಾಗಿ ಈ ವಿಶೇಷ ಬಸ್ಸುಗಳು ಕಾರ್ಯಾಚರಣೆ ನಡೆಸಲಿವೆ. ಬೆಂಗಳೂರು ಮತ್ತು ಇತರ ಪ್ರಮುಖ ಸ್ಥಳಗಳಿಂದ ಹಬ್ಬದ ನಂತರವೂ ಇದೇ 14 ಮತ್ತು 15 ರಂದು ಈ ಹೆಚ್ಚುವರಿ ಬಸ್ಸುಗಳ ಸಂಚಾರ ಇರುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಅಂದಾಜು 114 ಹೆಚ್ಚುವರಿ ವಿಶೇಷ ಬಸ್ಸುಗಳು ಕಾರ್ಯಾಚರಣೆ ನಡೆಸುತ್ತವೆ ಎಂದು ಮಾಹಿತಿ ನೀಡಲಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement