#AdityaL1 | ಯಶಸ್ಸಿನ ಹಾದಿಯಲ್ಲಿ ಸಾಗುತ್ತಿರುವ ಆದಿತ್ಯ ಎಲ್‌ 1 | ಮತ್ತೊಂದು ಎತ್ತರದ ಕಕ್ಷೆ ಸೇರಿ ಸೂರ್ಯನಿಗೆ ಇನ್ನಷ್ಟು ಹತ್ತಿರವಾದ ಆದಿತ್ಯ ನೌಕೆ

September 11, 2023
12:26 PM
ಸೂರ್ಯನ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ  ಉಡಾವಣೆ ಮಾಡಿರುವ ಆದಿತ್ಯ ಎಲ್‌1  ನೌಕೆಯನ್ನು ಮತ್ತೊಂದು ಕಕ್ಷೆಗೆ ಯಶಸ್ವಿಯಾಗಿ ಏರಿಸಲಾಗಿದೆ. ಕಕ್ಷೆ ಎತ್ತರಿಸುವ 3ನೇ ಪ್ರಕ್ರಿಯೆಯು ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ.

ಚಂದ್ರಯಾನ – 3 Chandrayana – 3 ಯಶಸ್ವಿ ಉಡಾವಣೆ ನಂತರ ಇಸ್ರೋ ISRO ಸಾಧನೆ ಮೇಲೆ ಸಾಧನೆಗೈಯ್ಯುತ್ತಿದೆ. ತದನಂತರ ಉಡಾವಣೆ ಮಾಡಿದ್ದ ಆದಿತ್ಯ ಎಲ್‌1 Aditya L1 ಕೂಡ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಸೂರ್ಯನ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ  ಉಡಾವಣೆ ಮಾಡಿರುವ ಆದಿತ್ಯ ಎಲ್‌1  ನೌಕೆಯನ್ನು ಮತ್ತೊಂದು ಕಕ್ಷೆಗೆ ಯಶಸ್ವಿಯಾಗಿ ಏರಿಸಲಾಗಿದೆ. ಕಕ್ಷೆ ಎತ್ತರಿಸುವ 3ನೇ ಪ್ರಕ್ರಿಯೆಯು ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ. ಯಶಸ್ವಿ ಕಾರ್ಯಾಚರಣೆಯ ನಂತರ, ಆದಿತ್ಯ ನೌಕೆಯು ಈಗ 296 ಕಿಮೀ x 71767 ಕಿ.ಮೀ. ಎತ್ತರದ ಕಕ್ಷೆಯಲ್ಲಿ ಪರಿಭ್ರಮಣೆ ನಡೆಸುತ್ತಿದೆ. ಮುಂದಿನ ಕಾರ್ಯಾಚರಣೆಯನ್ನು ಸೆಪ್ಟೆಂಬರ್ 15 ರಂದು ಮುಂಜಾನೆ 2 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.

Advertisement
Advertisement

ಸೂರ್ಯನನ್ನು ಅಧ್ಯಯನ ಮಾಡುವ ಇಸ್ರೋದ ಮಹತ್ವಾಕಾಂಕ್ಷೆಯ ಮಿಷನ್ ಸೆಪ್ಟೆಂಬರ್ 2 ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಯಿತು. ಬಾಹ್ಯಾಕಾಶ ನೌಕೆಯು 125 ದಿನಗಳ ನಂತರ L1 ಪಾಯಿಂಟ್‌ನಲ್ಲಿ ಉದ್ದೇಶಿತ ಕಕ್ಷೆಗೆ ಆಗಮಿಸುವ ನಿರೀಕ್ಷೆಯಿದೆ. ಇದಕ್ಕೂ ಮುನ್ನ ಆದಿತ್ಯ-ಎಲ್1 ಉಪಗ್ರಹ ಭೂಮಿ ಮತ್ತು ಚಂದ್ರನ ಅದ್ಭುತ ಚಿತ್ರಗಳನ್ನು ಹಂಚಿಕೊಂಡಿತ್ತು.

ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯು ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಲಾಗ್ರೇಂಜ್ ಪಾಯಿಂಟ್ 1 ಅಥವಾ ಎಲ್-1 ಪಾಯಿಂಟ್‌ನಿಂದ ಸೂರ್ಯನನ್ನು ಅಧ್ಯಯನ ನಡೆಸಲಿದೆ. ISRO ಪ್ರಕಾರ, L1 ಬಿಂದುವಿನ ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾದ ಬಾಹ್ಯಾಕಾಶ ನೌಕೆಯು ಯಾವುದೇ ಗ್ರಹಣಗಳಿಲ್ಲದೆ ಸೂರ್ಯನನ್ನು ನಿರಂತರವಾಗಿ ವೀಕ್ಷಿಸುವ ಪ್ರಯೋಜನವನ್ನು ಹೊಂದಿದೆ. ಇದು ಸೌರ ಚಟುವಟಿಕೆಗಳನ್ನು ವೀಕ್ಷಿಸಲು ಹೆಚ್ಚಿನ ಪ್ರಯೋಜನವನ್ನು ಒದಗಿಸುತ್ತದೆ.

– ಅಂತರ್ಜಾಲ ಮಾಹಿತಿ

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ
May 16, 2025
9:51 PM
by: The Rural Mirror ಸುದ್ದಿಜಾಲ
ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ
May 16, 2025
9:43 PM
by: The Rural Mirror ಸುದ್ದಿಜಾಲ
ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ
May 16, 2025
9:38 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group