ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

May 16, 2025
7:16 AM

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ ಬೇಡಿಕೆಯನ್ನು ಪೂರೈಸಲು ಹೊಸ ಆಯ್ಕೆಗಳನ್ನು ಉತ್ತೇಜಿಸುವ ಅವಶ್ಯಕತೆಯಿದೆ. ಕಡಿಮೆ ಭೂಮಿಯಲ್ಲಿ ಹೆಚ್ಚು ಇಳುವರಿ ನೀಡಲು ಲಂಬ ಕೃಷಿ ತಂತ್ರಜ್ಞಾನದಲ್ಲಿ ಹೆಚ್ಚಿನ ಕೆಲಸ ಅಗತ್ಯವಿದೆ ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿಪ್ರಾಯಪಟ್ಟರು.

Advertisement

ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವ ಅಧ್ಯಕ್ಷತೆ ವಹಿಸಿ  ಮಾತನಾಡಿದ ಅವರು “ಭಾರತೀಯ ಕೃಷಿ ಸಂಶೋಧನಾ ಮಂಡಳಿ ಮತ್ತು ರಾಜ್ಯ ಕೃಷಿ ವಿಶ್ವವಿದ್ಯಾಲಯಗಳು ಅಭಿವೃದ್ಧಿಪಡಿಸಿದ ಸುಧಾರಿತ ಬೀಜಗಳು ಮತ್ತು ಸುಧಾರಿತ ತಳಿಗಳು ರೈತರ ಆದಾಯವನ್ನು ಹೆಚ್ಚಿಸುವಲ್ಲಿ ಸಹಾಯಕವಾಗಿವೆ. ಕೃಷಿ ಕ್ಷೇತ್ರದಲ್ಲಿ ಡಿಜಿಟಲ್ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಡ್ರೋನ್ ತಂತ್ರಜ್ಞಾನ, ಉಪಗ್ರಹ ಚಿತ್ರಣ ಮತ್ತು ಸ್ಮಾರ್ಟ್ ನೀರಾವರಿ ವ್ಯವಸ್ಥೆಗಳ ಬಳಕೆಯು ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ನೀರಿನ ಬಳಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ” ಎಂದರು.ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರವಾಗಿದೆ, ಕೃಷಿಯನ್ನು ಅಭಿವೃದ್ಧಿಗೊಳಿಸುವಲ್ಲಿ ಕೃಷಿ ವಿಶ್ವವಿದ್ಯಾಲಯಗಳ ಪಾತ್ರ ಪ್ರಮುಖವಾಗಿದ್ದು, ಸಮಗ್ರ ಕೃಷಿಯ ಪ್ರಗತಿಗೆ ಹಾಗೂ ಸುಧಾರಿತ ತಳಿಗಳ ಸಂಶೋಧನೆಗೆ ಹೆಚ್ಚಿನ ಮಹತ್ವ ನೀಡಿವೆ ಎಂದು ಹೇಳಿದರು. ಕೃಷಿಯಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ರೈತರ ಹಾಗೂ ಕೃಷಿ ಕ್ಷೇತ್ರದ ಪ್ರಗತಿಗಾಗಿ ಶ್ರಮಿಸಬೇಕು, ವೈಯಕ್ತಿಯ ಬೆಳವಣಿಗೆಯ ಜೊತೆಗೆ ತಮ್ಮ ಜ್ಞಾನವನ್ನು ಸಮಾಜಮುಖಿ ಕಾರ್ಯಗಳಿಗಾಗಿ ಬಳಸಬೇಕು ಎಂದರು.

ಸಚಿವ ಎನ್. ಚಲುವನಾರಾಯಣಸ್ವಾಮಿ ಮಾತನಾಡಿ, ಗುಣಮಟ್ಟದ ಶಿಕ್ಷಣದ ಜೊತೆಗೆ, ಕೃಷಿಗೆ ಸಂಬಂಧಿಸಿದ  ನೂತನ ಸಂಶೋಧನೆ ಹಾಗೂ ಅವಿಷ್ಕಾರಗಳ  ಮೂಲಕ ಕೃಷಿ ವಿಶ್ವವಿದ್ಯಾಲಯ ಪ್ರಗತಿ ಸಾಧಿಸಿದೆ, ಸುಧಾರಿತ ಬೀಜಗಳನ್ನು ಹಾಗೂ ನೂತನ ತಳಿಗಳಿಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ರೈತರ ಆದಾಯ ಹೆಚ್ಚಿಸಲು ವಿದ್ಯಾಲಯ ಸಹಕಾರಿಯಾಗಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಸಚಿವರಾದ ಎನ್.ಚಲುವನಾರಾಯಣಸ್ವಾಮಿ, ನವದೆಹಲಿ ಇಫ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಯು.ಎಸ್.ಅವಸ್ಥಿ, ಕುಲಪತಿ ಡಾ.ಎಸ್.ವಿ.ಸುರೇಶ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಕ್ಕಿಗಳಿಗೆ ಗೂಡುಕಟ್ಟುವ ಪರಿಸರ ಪ್ರೇಮಿ..
July 8, 2025
10:18 AM
by: The Rural Mirror ಸುದ್ದಿಜಾಲ
ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ
July 8, 2025
7:11 AM
by: The Rural Mirror ಸುದ್ದಿಜಾಲ
ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!
July 8, 2025
7:04 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್
July 7, 2025
11:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group