ಇತ್ತೀಚೆಗೆ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆ ವಿಸ್ತರಿಸಲಾಗುತ್ತಿದೆ. ಆದರೆ, ಅಡಿಕೆಗೆ ತಗುಲುವ ರೋಗದಿಂದ ರೈತರು ಕಂಗಾಲಾಗಿದ್ದಾರೆ. ಪರ್ಯಾಯ ಬೆಳೆಯಾಗಿ ತಾಳೆ ಬೆಳೆಯುವುದರಿಂದ ಉತ್ತಮ ಆದಾಯ ಗಳಿಸಬಹುದು ಅಲ್ಲದೆ ಬೆಳೆ ಕಳವಾಗುವ ಆತಂಕವೂ ಇರುವುದಿಲ್ಲ ಎಂದು ಕೃಷಿ ಜಂಟಿ ನಿರ್ದೇಶಕ ಡಿ.ಪಿ ಸತೀಶ್ ಹೇಳಿದ್ದಾರೆ.
ಉತ್ತರಕನ್ನಡ ಯಲ್ಲಾಪುರ ತಾಲೂಕಿನ ಮಲವಳ್ಳಿಯಲ್ಲಿ ತೋಟಗಾರಿಕಾ ಇಲಾಖೆ ಮತ್ತು ಶ್ರೀದೇವಿ ಸೇವಾ ರೈತ ಉತ್ಪಾದಕ ಕಂಪನಿ ವತಿಯಿಂದ ರೈತ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ಸಂದರ್ಭ ಎಲೆಚುಕ್ಕೆ ರೋಗ, ತಾಳೆ ಬೆಳೆ, ಅಡಿಕೆ ಕೃಷಿ ಕುರಿತು ರೈತರಿಗೆ ತಜ್ಞರು ಮಾಹಿತಿ ನೀಡಿದರು.
ಕೃಷಿ ವಿಜ್ಞಾನಿ ರೂಪಾ ಪಾಟೀಲ್, ಉತ್ತರಕನ್ನಡ ಜಿಲ್ಲೆಯಲ್ಲಿ ಜೇನು ಕೃಷಿ, ತಾಳೆ, ಭತ್ತ ಬೆಳೆಯಲು ಉತ್ತಮ ವಾತಾವರಣವಿದೆ. ಸರ್ಕಾರ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿಯಲ್ಲಿ ಏಳಿಗೆ ಕಂಡುಕೊಳ್ಳಬೇಕು ಎಂದರು.
ಕೃಷಿ ಎಂದಿಗೂ ಕಷ್ಟವಲ್ಲ ಆದರೆ, ಕೃಷಿಯಲ್ಲಿ ಹೆಚ್ಚು ಸಂಶೋಧನೆ ನಡೆದಾಗ ರೈತರು ಉತ್ತಮ ಆದಾಯ ಗಳಿಸಲು ಸಾಧ್ಯ ಎಂದು ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಸುಬ್ರಹ್ಮಣ್ಯ ಗೌಂವ್ಕರ್ ಅಭಿಪ್ರಾಯಪಟ್ಟರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.


