ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ

July 21, 2025
6:58 AM

ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು ಉತ್ತೇಜನ ನೀಡುತ್ತಿದೆ. ಇದರಿಂದ ರೈತರಿಗೆ ಹಣ, ಸಮಯ ಉಳಿತಾಯವಾಗುವುದರ ಜತೆಗೆ ಮಣ್ಣಿನ ಫಲವತ್ತತೆಯನ್ನೂ ಕಾಪಾಡಬಹುದಾಗಿದೆ ಎಂದು ದಾವಣಗೆರೆ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಶ್ರೀಧರಮೂರ್ತಿ ಹೇಳಿದ್ದಾರೆ.

ದಾವಣಗೆರೆ ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಕೃಷಿ ಇಲಾಖೆ, ಇಫ್ಕೋ ಸಂಸ್ಥೆಯಿಂದ  ಆಯೋಜಿಸಲಾಗಿದ್ದ  ಡ್ರೋಣ್ ಮೂಲಕ ನ್ಯಾನೋ ಯೂರಿಯಾ ಸಿಂಪಡಣೆ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹರಳು ರೂಪದ ಯೂರಿಯಾವನ್ನು ಹೆಚ್ಚು ಬಳಸುವುದರಿಂದ ಭೂಮಿಯ ಫಲವತ್ತತೆ ಹಾಳಾಗುವುದಲ್ಲದೇ, ಬೆಳೆಗಳಿಗೆ ಅನುಕೂಲವಾಗುವ ಸೂಕ್ಷ್ಮ ಮಣ್ಣು ಜೀವಿಗಳು ನಾಶವಾಗುತ್ತವೆ. ಆದರೆ ನ್ಯಾನೋ ಯೂರಿಯಾ ಸಿಂಪಡಣೆ ಮಾಡುವುದರಿಂದ ಬೆಳೆಯಲ್ಲಿ ಶೇಕಡ ೮೦ ರಷ್ಟು ಅಧಿಕ ಇಳುವರಿ ಕಾಣಬಹುದಾಗಿದೆ  ಎಂದು ಶ್ರೀಧರಮೂರ್ತಿ ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌
ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?
September 28, 2026
1:03 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ
September 28, 2026
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror