ಅಡಿಕೆ ಹಾನಿಕಾರಕವಲ್ಲ, ಅಡಿಕೆಯಲ್ಲಿ ಹಲವು ಉತ್ತಮ ಆರೋಗ್ಯಕರ ಅಂಶವಿದ್ದು, ಈ ಬಗ್ಗೆ ಸಂಶೋಧನಾ ವರದಿಗಳು ಹೊರಬರುತ್ತಿದೆ. ಹೀಗಾಗಿ ಹಲವು ಸಂಶೋಧನೆಗಳನ್ನು ಇರಿಸಿ ಸುಪ್ರಿಂ ಕೋರ್ಟ್ ಗೆ ಅಡಿಕೆ ಹಾನಿಕಾರಕವಲ್ಲ ಎಂದು ಅಫಿಡವಿಟ್ ಸಲ್ಲಿಸಲಿದ್ದೇವೆ ಎಂದು ಗೃಹ ಸಚಿವ, ಅಡಿಕೆ ಟಾಸ್ಕ್‌ಫೋರ್ಸ್ ಸಮಿತಿ ಅಧ್ಯಕ್ಷ ಆರಗ ಜ್ಞಾನೇಂದ್ರ ಹೇಳಿದರು.
ಶಿರಸಿಯಲ್ಲಿ ರಾಘವೇಂದ್ರ ಮಠದಲ್ಲಿ ಪರಿವಾರ ಸಹಕಾರಿ ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಅರಗ ಜ್ಞಾನೇಂದ್ರ ಅಡಿಕೆಯಲ್ಲಿ ಹಲವು ಉತ್ತಮ ಅಂಶಗಳು ಇವೆ. ಆದರೆ ಇಂಡೋನೇಶಿಯಾ ಸೇರಿದಂತೆ ವಿದೇಶಿ ಅಡಿಕೆ ಕಳಪೆ ಗುಣಮಟ್ಟದ್ದು ಎಂದು ಕಂಡು ಹಿಡಿದಿದ್ದು ಇದನ್ನು ಸುಪ್ರಿಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದೇವೆ ಎಂದರು.ಹೊರ ದೇಶದ ಅಡಿಕೆ ಆಮದು ಸಂಬಂಧಿಸಿದಂತೆ ಈಗಾಗಲೇ ಕೆಲವು ದೇಶಗಳೊಂದಿಗೆ ಒಪ್ಪಂದ ಇರುವುದರಿಂದ ಬರುತ್ತಿದೆ. ಆದರೆ ಗುಣಮಟ್ಟ ಪರೀಕ್ಷೆ ನಡೆಸಿ ಅದನ್ನು ತಿರಸ್ಕರಿಸುವ ಮೂಲಕ ಅಡಿಕೆ ಬೆಳೆಗಾರರ ರಕ್ಷಣೆ ಮಾಡುತ್ತೇವೆ ಎಂದು ಹೇಳಿದರು.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…