Advertisement
MIRROR FOCUS

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ | 6.3 ತೀವ್ರತೆಯ ಭೂಕಂಪಕ್ಕೆ 2,000 ಕ್ಕೂ ಹೆಚ್ಚು ಮಂದಿ ಬಲಿ |

Share

ಇರಾನ್ ಗಡಿಯ ಸಮೀಪ ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 2000 ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಶನಿವಾರ 6.3 ತೀವ್ರತೆಯ ಭೂಕಂಪವು ಹೆರಾತ್ ನಗರದ ಸಮೀಪವಿರುವ ಕನಿಷ್ಠ 12 ಹಳ್ಳಿಗಳನ್ನು ನಾಶಗೊಳಿಸಿದೆ.

ಅಪ್ಘಾನಿಸ್ತಾನದ ಗ್ರಾಮೀಣ ಪ್ರದೇಶಗಳಿಂದ ಮಾಧ್ಯಮಗಳಿಗೆ ಬಂದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ, ತಾಲಿಬಾನ್ ಸರ್ಕಾರಿ ಇಲಾಖೆಯು  2,000 ಕ್ಕಿಂತ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂದು ತಿಳಿಸಿದೆ.ಕನಿಷ್ಠ 465 ಮನೆಗಳನ್ನು ನೆಲಸಮವಾಗಿವೆ.

ಶನಿವಾರ ಸಂಭವಿಸಿದ ಪ್ರಬಲವಾದ ನಂತರದ  ಸುತ್ತಲೂ ಕಟ್ಟಡಗಳು ಕುಸಿದು ಬಿದ್ದಿವೆ ಎಂದು ಬದುಕುಳಿದವರು ತಮ್ಮ ಭಯವನ್ನು ವಿವರಿಸಿದರು. ಘಟನೆಯಿಂದ ಸಾವಿರಾರು ಜನರು ಗಾಯಗೊಂಡಿದ್ದಾರೆ. ಅಸಮರ್ಪಕ ವೈದ್ಯಕೀಯ ಸೌಲಭ್ಯಗಳಿರುವ ದೇಶದಲ್ಲಿ, ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ಹೆಣಗಾಡುತ್ತಿವೆ.

ಗ್ರಾಮೀಣ ಭಾಗದಲ್ಲಿನ ಹಳ್ಳಿಗಳಲ್ಲಿ ಇರುವ ಮಣ್ಣಿನ ಮನೆಗಳು ಕುಸಿದವು. “ಮೊದಲ ಅಲುಗಾಡುವಿಕೆಯಲ್ಲಿ ಎಲ್ಲಾ ಮನೆಗಳು ಕುಸಿದವು” ಎಂದು ಹೆರಾತ್ ನಿವಾಸಿ ಬಶೀರ್ ಅಹ್ಮದ್ ಅವರ ಕುಟುಂಬವು AFP ಸುದ್ದಿ ಸಂಸ್ಥೆಗೆ ತಿಳಿಸಿದೆ.

ಹೆರಾತ್ ಇರಾನಿನ ಗಡಿಯ ಪೂರ್ವಕ್ಕೆ 75 ಮೈಲು ದೂರದಲ್ಲಿದೆ. ಇದನ್ನು ಅಫ್ಘಾನಿಸ್ತಾನದ ಸಾಂಸ್ಕೃತಿಕ ರಾಜಧಾನಿ ಎಂದು ಪರಿಗಣಿಸಲಾಗಿದೆ. ಅಂದಾಜು 1.9 ಮಿಲಿಯನ್ ಜನರು ಈ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದಾರೆಂದು ನಂಬಲಾಗಿದೆ.

ಕಳೆದ ವರ್ಷ ಜೂನ್‌ನಲ್ಲಿ, ಪಕ್ಟಿಕಾ ಪ್ರಾಂತ್ಯವು 5.9 ತೀವ್ರತೆಯ ಭೂಕಂಪದಿಂದ 1,000 ಕ್ಕೂ ಹೆಚ್ಚು ಜನರು ಬಲಿಯಾಗಿದ್ದರು.ಅನೇಕರು ನಿರಾಶ್ರಿತರಾಗಿದ್ದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

6 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

6 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

6 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

10 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

2 days ago