ಮಂಗಳೂರು | ಆಫ್ರಿಕನ್ ಹಂದಿ ಜ್ವರ ತಡೆಗಟ್ಟಲು ಅಗತ್ಯ ಕ್ರಮ | ದ ಕ ಜಿಲ್ಲಾಧಿಕಾರಿ

November 3, 2022
8:02 PM

ಮಂಗಳೂರು ತಾಲೂಕಿನ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರವೊಂದರ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ  ಇರುವುದು ದೃಢಪಟ್ಟಿರುತ್ತದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮಕೈಗೊಳ್ಳಲಾಗಿರುತ್ತದೆ ಎಂದು ದ ಕ ಜಿಲ್ಲಾಧಿಕಾರಿ ರವಿಕುಮಾರ್‌ ಎಂ ಆರ್‌ ತಿಳಿಸಿದ್ದಾರೆ.

Advertisement
Advertisement
Advertisement

ಹಂದಿ ಸಾಕಾಣಿಕಾ ಕೇಂದ್ರದಿಂದ 1 ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು 10ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯವೆಂದು ಘೋಷಿಸಲಾಗಿದೆ. ರೋಗಪೀಡಿತ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಆಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಲು ಹಾಗೂ ಅಲ್ಲಿಗೆ ಸಾರ್ವಜನಿಕರು ಭೇಟಿ ನೀಡದಂತೆ ನಾಮಫಲಕ ಅಳವಡಿಸುವಂತೆ ಸೂಚಿಸಲಾಗಿದೆ.

Advertisement

ಆಫ್ರಿಕನ್ ಹಂದಿ ಜ್ವರವು ಮನುಷ್ಯರಿಗೆ ಯಾವುದೇ ರೀತಿಯ ರೋಗವುಂಟು ಮಾಡುವುದಿಲ್ಲ. ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಲು ಸಲಹೆ ನೀಡಲಾಗಿದೆ. ಜಾಗೃತ ವಲಯದಲ್ಲಿರುವ ಹಂದಿ ಸಾಕಾಣಿಕೆದಾರರು ಮತ್ತು ಇತರರು ಸದ್ಯಕ್ಕೆ ರೋಗ ಪೀಡಿತವಲಯಕ್ಕೆ ಭೇಟಿ ನೀಡಬಾರದು ಮತ್ತು ಅಪರಿಚಿತರಿಂದ ಹಂದಿ ಮರಿಗಳನ್ನು ಮತ್ತು ಮಾಂಸವನ್ನು ಖರೀದಿಸಬಾರದು. ತಮ್ಮ ಹಂದಿ ಸಾಕಾಣಿಕಾ ಕೇಂದ್ರಗಳನ್ನು ಬಿಸಿ ನೀರಿನಿಂದ ತೊಳೆದು, ಕ್ರಿಮಿ ನಾಶಕಗಳನ್ನು ಸಿಂಪಡಿಸುತ್ತಿರಬೇಕು. ಹಂದಿಗಳಿಗೆ ನೀಡಲಾಗುವ ಹೋಟೆಲ್ ತ್ಯಾಜ್ಯಗಳನ್ನು ನೀಡದಿರುವುದು ಒಳಿತು, ಅನಿವಾರ್ಯ ಸಂದರ್ಭದಲ್ಲಿ ಚೆನ್ನಾಗಿ ಬೇಯಿಸಿ ನೀಡುವುದು. ಆಫ್ರಿಕನ್ ಹಂದಿ ಜ್ವರವು ಹಂದಿಗಳಿಂದ ಅಥವಾ ಮಾಂಸ ಸೇವಿಸುವುದರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದ್ದರಿಂದ ಸಾರ್ವಜನಿಕರು ಮತ್ತು ಹಂದಿ ಪಾಲಕರು ಭಯಭೀತರಾಗುವ ಅವಶ್ಯಕತೆ ಇಲ್ಲ.

ಹಂದಿ ಪಾಲಕರು ಸೂಕ್ತ ಮುಂಜಾಗೃತ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾ ಜಾನುವಾರು ರೋಗಗಳ ನಿರ್ವಹಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗದಗದ ಲಕ್ಕುಂಡಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮಕ್ಕೆ ಚಾಲನೆ
November 25, 2024
7:33 AM
by: The Rural Mirror ಸುದ್ದಿಜಾಲ
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ
November 25, 2024
7:26 AM
by: The Rural Mirror ಸುದ್ದಿಜಾಲ
ಮಲೆನಾಡಿನಲ್ಲಿ ಕಾಡಾನೆ ಹಾವಳಿ ತಡೆಗೆ ಅಧಿವೇಶನದಲ್ಲಿ ಚರ್ಚಿಸಿ ಶಾಶ್ವತ ಪರಿಹಾರ
November 25, 2024
7:15 AM
by: The Rural Mirror ಸುದ್ದಿಜಾಲ
ಅಡಿಕೆ ಹಳದಿ ಎಲೆರೋಗ ಬಾಧಿಸಿದ ನಂತರದ ಕೃಷಿ ಬದುಕು ಹೇಗೆ ? ಕೃಷಿಕರು ಸವಾಲನ್ನು ಹೇಗೆ ಸ್ವೀಕರಿಸಬಹುದು..? | ಸಂಪಾಜೆಯ ಕೃಷಿಕ ಶಂಕರಪ್ರಸಾದ್‌ ರೈ ಅವರ ಅಭಿಪ್ರಾಯ |
November 25, 2024
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror