ಮಂಗಳೂರು ತಾಲೂಕಿನ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರವೊಂದರ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿರುತ್ತದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮಕೈಗೊಳ್ಳಲಾಗಿರುತ್ತದೆ ಎಂದು ದ ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ತಿಳಿಸಿದ್ದಾರೆ.
ಹಂದಿ ಸಾಕಾಣಿಕಾ ಕೇಂದ್ರದಿಂದ 1 ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು 10ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯವೆಂದು ಘೋಷಿಸಲಾಗಿದೆ. ರೋಗಪೀಡಿತ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಆಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಲು ಹಾಗೂ ಅಲ್ಲಿಗೆ ಸಾರ್ವಜನಿಕರು ಭೇಟಿ ನೀಡದಂತೆ ನಾಮಫಲಕ ಅಳವಡಿಸುವಂತೆ ಸೂಚಿಸಲಾಗಿದೆ.
ಆಫ್ರಿಕನ್ ಹಂದಿ ಜ್ವರವು ಮನುಷ್ಯರಿಗೆ ಯಾವುದೇ ರೀತಿಯ ರೋಗವುಂಟು ಮಾಡುವುದಿಲ್ಲ. ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಲು ಸಲಹೆ ನೀಡಲಾಗಿದೆ. ಜಾಗೃತ ವಲಯದಲ್ಲಿರುವ ಹಂದಿ ಸಾಕಾಣಿಕೆದಾರರು ಮತ್ತು ಇತರರು ಸದ್ಯಕ್ಕೆ ರೋಗ ಪೀಡಿತವಲಯಕ್ಕೆ ಭೇಟಿ ನೀಡಬಾರದು ಮತ್ತು ಅಪರಿಚಿತರಿಂದ ಹಂದಿ ಮರಿಗಳನ್ನು ಮತ್ತು ಮಾಂಸವನ್ನು ಖರೀದಿಸಬಾರದು. ತಮ್ಮ ಹಂದಿ ಸಾಕಾಣಿಕಾ ಕೇಂದ್ರಗಳನ್ನು ಬಿಸಿ ನೀರಿನಿಂದ ತೊಳೆದು, ಕ್ರಿಮಿ ನಾಶಕಗಳನ್ನು ಸಿಂಪಡಿಸುತ್ತಿರಬೇಕು. ಹಂದಿಗಳಿಗೆ ನೀಡಲಾಗುವ ಹೋಟೆಲ್ ತ್ಯಾಜ್ಯಗಳನ್ನು ನೀಡದಿರುವುದು ಒಳಿತು, ಅನಿವಾರ್ಯ ಸಂದರ್ಭದಲ್ಲಿ ಚೆನ್ನಾಗಿ ಬೇಯಿಸಿ ನೀಡುವುದು. ಆಫ್ರಿಕನ್ ಹಂದಿ ಜ್ವರವು ಹಂದಿಗಳಿಂದ ಅಥವಾ ಮಾಂಸ ಸೇವಿಸುವುದರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದ್ದರಿಂದ ಸಾರ್ವಜನಿಕರು ಮತ್ತು ಹಂದಿ ಪಾಲಕರು ಭಯಭೀತರಾಗುವ ಅವಶ್ಯಕತೆ ಇಲ್ಲ.
ಹಂದಿ ಪಾಲಕರು ಸೂಕ್ತ ಮುಂಜಾಗೃತ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾ ಜಾನುವಾರು ರೋಗಗಳ ನಿರ್ವಹಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…