ದೆಹಲಿ ಚಲೋ ನಂತರ ಇದೀಗ ಬೆಂಗಳೂರು ಚಲೋ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೆ.17ರಂದು ರೈತರಿಂದ ಸಮಾವೇಶ

February 15, 2024
2:12 PM

ದೆಹಲಿ ಚಲೋ (Dehli Chalo) ನಂತರ ಇದೀಗ ಬೆಂಗಳೂರು ಚಲೋ(Bengaluru Chalo) ಸಮಾವೇಶ ಹಮ್ಮಿಕೊಳ್ಳಲು ರಾಜ್ಯದ(state) ರೈತರ ಸಂಘಗಳು(Frmers Association) ನಿರ್ಧರಿಸಿವೆ. ಬೆಂಬಲ ಬೆಲೆ ಖಾತ್ರಿ ಪಡಿಸುವ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ರಾಜ್ಯಗಳ ರೈತರು ʻದೆಹಲಿ ಚಲೋʼ ಪ್ರತಿಭಟನೆ ಆರಂಭಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯದಲ್ಲಿಯೂ ರೈತರು (Farmers) ತಮ್ಮ ಬೇಡಿಕೆಗಳನ್ನು ಒತ್ತಾಯಿಸಿ ಬೃಹತ್‌ ಸಮಾವೇಶ ಹಮ್ಮಿಕೊಂಡಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಆಶ್ರಯದಲ್ಲಿ ವಿವಿಧ ಬೇಡಿಕೆಗೆ ಆಗ್ರಹಿಸಿ ಫೆ.17ರಂದು ʻಬೆಂಗಳೂರು ಚಲೋʼ  ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಬರುವ ರೈತರಿಗೆ ಆಯಾ ಜಿಲ್ಲೆಗಳಿಂದ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಅಧ್ಯಕ್ಷ ಬೀರಪ್ಪ ದೇಶನೂರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಫೆ.17ರಂದು ರೈತರು ತಮ್ಮ ಬೇಡಿಕೆಗಳನ್ನು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಈ ಬೃಹತ್‌ ಸಮಾವೇಶದಲ್ಲಿ ರಾಜ್ಯಾದ್ಯಂತ ಸುಮಾರು 15 ಸಂಘಟನೆಗಳ ರೈತ ಮುಖಂಡರು, ರೈತ ಮಹಿಳೆಯರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಫೆ.16ರಂದು ಸಂಜೆ ಪ್ರತಿಯೊಬ್ಬ ರೈತರೂ ತಮ್ಮ ಜಿಲ್ಲೆಯ ಹಾಗೂ ತಾಲೂಕು, ಪಟ್ಟಣ, ಗ್ರಾಮಗಳಿಂದ ಬೆಂಗಳೂರಿಗೆ ಬರಬೇಕು ಎಂದು ಮನವಿ ಮಾಡಿದ್ದಾರೆ.

– ಅಂತರ್ಜಾಲ ಮಾಹಿತಿ

Farmers of various states have started “Delhi Chalo” protest demanding fulfillment of various demands including law enforcement to ensure support price. In the wake of this, farmers have held a huge convention in the state to demand their demands.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror