ವಿದ್ಯುತ್ ಬಿಲ್, ನೀರಿನ ಬಿಲ್ ನಂತರ ಪದವಿ ಶಿಕ್ಷಣ ಶುಲ್ಕ ಹೆಚ್ಚಿಸಿದ ರಾಜ್ಯ ಸರ್ಕಾರ | ರಾಜ್ಯದಲ್ಲಿ ದುಬಾರಿಯಾದ ಪದವಿ ಶಿಕ್ಷಣ

January 4, 2024
12:53 PM

ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಪಾಲಿಗೆ ಇನ್ನು ಮುಂದೆ ಶಿಕ್ಷಣವೂ(Education) ಮತ್ತಷ್ಟು ದುಬಾರಿಯಾಗಲಿದೆ. ರಾಜ್ಯ ಸರ್ಕಾರ(State Govt) ವಿದ್ಯುತ್ ಬಿಲ್(Electric bill) ಹಾಗೂ ನೀರಿನ ಬಿಲ್(Water Bill) ಹೆಚ್ಚಳ ಮಾಡಿದ ಬಳಿಕ ಪದವಿ ಶಿಕ್ಷಣ ಶುಲ್ಕವನ್ನು 10% ಹೆಚ್ಚಳ (College Fees Hike) ಮಾಡಿ ಜನರಿಗೆ ಶಾಕ್ ನೀಡಿದೆ. ವಿಶ್ವವಿದ್ಯಾಲಯಗಳು(University) ಸಲ್ಲಿಸಿದ್ದ ಶುಲ್ಕ ಹೆಚ್ಚಳ ಪ್ರಸ್ತಾವನೆಗೆ ಉನ್ನತ ಶಿಕ್ಷಣ ಇಲಾಖೆ (Karnataka Higher Education Council) ಒಪ್ಪಿಗೆ ಕೊಟ್ಟಿದೆ.

Advertisement

ಇದರಿಂದ ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಜ್‍ಗಳ ಶಿಕ್ಷಣ ಶುಲ್ಕವನ್ನು 10% ಹೆಚ್ಚಿಸಲು ಸರ್ಕಾರದಿಂದ ಅನುಮತಿ ಸಿಕ್ಕಂತಾಗಿದೆ. ಪ್ರಸ್ತುತ ವರ್ಷದಿಂದಲೇ ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ಏಕರೂಪ ಶುಲ್ಕ ತಜ್ಞರ ಸಮಿತಿ ನೀಡಿದ್ದ ವರದಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಯುವನಿಧಿಯಲ್ಲಿ ಕೊಡುತ್ತಿರುವ ಹಣ ಮತ್ತೊಂದು ರೀತಿಯಲ್ಲಿ ಸರ್ಕಾರ ವಾಪಸ್ ಪಡೆಯಲು ತೀರ್ಮಾನಿಸಿದಂತಿದೆ. ಇನ್ನು ಮುಂದೆ ರಾಜ್ಯದಲ್ಲಿ ಪದವಿ ಶಿಕ್ಷಣವೂ ದುಬಾರಿಯಾಗಲಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

After electricity bill, water bill, the state government has increased the graduation fee. Graduation education is expensive in the state.

– ಅಂತರ್ಜಾಲ ಮಾಹಿತಿ

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಒಂದು ವರ್ಷದಲ್ಲಿ 5600 ಕಿ.ಮೀ. ಹೆದ್ದಾರಿ ನಿರ್ಮಾಣ |
April 3, 2025
7:42 AM
by: The Rural Mirror ಸುದ್ದಿಜಾಲ
81 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯ
April 3, 2025
7:32 AM
by: The Rural Mirror ಸುದ್ದಿಜಾಲ
ಮೇಷ ರಾಶಿಯವರಿಗೆ ಬಹಳ ಶುಭ ದಿನ
April 3, 2025
7:05 AM
by: ದ ರೂರಲ್ ಮಿರರ್.ಕಾಂ
ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ
April 2, 2025
11:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group