ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಪಾಲಿಗೆ ಇನ್ನು ಮುಂದೆ ಶಿಕ್ಷಣವೂ(Education) ಮತ್ತಷ್ಟು ದುಬಾರಿಯಾಗಲಿದೆ. ರಾಜ್ಯ ಸರ್ಕಾರ(State Govt) ವಿದ್ಯುತ್ ಬಿಲ್(Electric bill) ಹಾಗೂ ನೀರಿನ ಬಿಲ್(Water Bill) ಹೆಚ್ಚಳ ಮಾಡಿದ ಬಳಿಕ ಪದವಿ ಶಿಕ್ಷಣ ಶುಲ್ಕವನ್ನು 10% ಹೆಚ್ಚಳ (College Fees Hike) ಮಾಡಿ ಜನರಿಗೆ ಶಾಕ್ ನೀಡಿದೆ. ವಿಶ್ವವಿದ್ಯಾಲಯಗಳು(University) ಸಲ್ಲಿಸಿದ್ದ ಶುಲ್ಕ ಹೆಚ್ಚಳ ಪ್ರಸ್ತಾವನೆಗೆ ಉನ್ನತ ಶಿಕ್ಷಣ ಇಲಾಖೆ (Karnataka Higher Education Council) ಒಪ್ಪಿಗೆ ಕೊಟ್ಟಿದೆ.
ಇದರಿಂದ ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಜ್‍ಗಳ ಶಿಕ್ಷಣ ಶುಲ್ಕವನ್ನು 10% ಹೆಚ್ಚಿಸಲು ಸರ್ಕಾರದಿಂದ ಅನುಮತಿ ಸಿಕ್ಕಂತಾಗಿದೆ. ಪ್ರಸ್ತುತ ವರ್ಷದಿಂದಲೇ ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ಏಕರೂಪ ಶುಲ್ಕ ತಜ್ಞರ ಸಮಿತಿ ನೀಡಿದ್ದ ವರದಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಯುವನಿಧಿಯಲ್ಲಿ ಕೊಡುತ್ತಿರುವ ಹಣ ಮತ್ತೊಂದು ರೀತಿಯಲ್ಲಿ ಸರ್ಕಾರ ವಾಪಸ್ ಪಡೆಯಲು ತೀರ್ಮಾನಿಸಿದಂತಿದೆ. ಇನ್ನು ಮುಂದೆ ರಾಜ್ಯದಲ್ಲಿ ಪದವಿ ಶಿಕ್ಷಣವೂ ದುಬಾರಿಯಾಗಲಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.
After electricity bill, water bill, the state government has increased the graduation fee. Graduation education is expensive in the state.
– ಅಂತರ್ಜಾಲ ಮಾಹಿತಿ
ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಬೆಂಗಳೂರು ಫ್ರೆಶ್ ಥಾನ್ ಓಟ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಹಾಗೂ ಮಳೆಗಾಲವನ್ನು ಎದುರಿಸಲು…
ರಾಜ್ಯದಲ್ಲಿ ಜನರ ಅನುಕೂಲಕ್ಕಾಗಿ ಎರಡು ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದೆ ಎಂದು ಸಾರಿಗೆ ಸಚಿವ…
ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ…
ದಕ್ಷಿಣ ರೈಲ್ವೆಯು ರೈಲು ವಿಕಾಸ ನಿಗಮ ಸಹಯೋಗದೊಂದಿಗೆ 531 ಕೋಟಿ ರೂಪಾಯಿ ವೆಚ್ಚದಲ್ಲಿ…
ಅಡುಗೆ ಅನಿಲ ಅಥವಾ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50…