ಬರೋಬ್ಬರಿ 25 ವರ್ಷದ ಬಳಿಕ ಜೆಡಿಎಸ್‌ಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ | ಎಚ್‌ ಡಿ ಕುಮಾರಸ್ವಾಮಿಯವರಿಗೆ ಕೃಷಿ ಮಂತ್ರಿ ನಿರೀಕ್ಷೆ |

June 10, 2024
11:35 AM
25 ವರ್ಷದ ಬಳಿಕ ಜೆಡಿಎಸ್‌ಗೆ ಕೇಂದ್ರದಲ್ಲಿ ಮಂತ್ರಿಗಿರಿ ಒಲಿದು ಬಂದಿದೆ. ಈಗ ಕೃಷಿ ಖಾತೆ ಸಿಕ್ಕಿದರೆ ಉತ್ತಮ ಎಂಬ ಅಭಿಲಾಷೆ ಹಲವು ರೈತರಲ್ಲಿದೆ.

ಬರೋಬ್ಬರಿ 25 ವರ್ಷದ ಬಳಿಕ ಜೆಡಿಎಸ್‌ಗೆ (JDS) ಕೇಂದ್ರದಲ್ಲಿ ಮಂತ್ರಿಗಿರಿ ಒಲಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಮೂರನೇ ಅಧಿಕಾರ ಅವಧಿಯಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ಕ್ಯಾಬಿನೆಟ್‌ ಮಂತ್ರಿಗಿರಿ (Cabinet Minister) ಸಿಕ್ಕಿದೆ. ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ 1996-97ರಲ್ಲಿ ದೇವೇಗೌಡರು (HD Devegowda) ಪ್ರಧಾನಿಯಾಗಿದ್ದರು. ಈ ಸಂದರ್ಭದಲ್ಲಿ ಕೆಲ ಕಾಲ ಗೃಹ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದರು.

Advertisement
Advertisement
Advertisement
Advertisement

ದೇವೇಗೌಡರು (Devegowda)  ಪ್ರಧಾನಿಯಾಗಿದ್ದ ಸಮಯದಲ್ಲಿ ಅಂದು ಜೆಡಿಎಸ್‌ ನಾಯಕರಾಗಿದ್ದ ಎಸ್‌.ಆರ್‌. ಬೊಮ್ಮಾಯಿ ಮತ್ತು ಸಿಎಂ ಇಬ್ರಾಹಿಂ ಅವರಿಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ಸಿಕ್ಕಿತ್ತು. ಆ ನಂತರ ಜೆಡಿಎಸ್‌ನಿಂದ ಸಂಸತ್‌ಗೆ ಆಯ್ಕೆ ಆಗುತ್ತಿದ್ದರೂ ಯಾರಿಗೂ ಮಂತ್ರಿ ಸ್ಥಾನ ಸಿಕ್ಕಿರಲಿಲ್ಲ.  2004, 2009ರ ಚುನಾವಣೆಯಲ್ಲಿ ಯುಪಿಎ (UPA)  ಸರ್ಕಾರ ಅಧಿಕಾರದಲ್ಲಿದ್ದರೆ 2014 ರಿಂದ 2024ರ ವರೆಗೆ ಎನ್‌ಡಿಎ (NDA) ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿತ್ತು. 2014ರ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದ ಜೆಡಿಎಸ್‌ 2019ರಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡು ಕೇವಲ ಒಂದು ಸ್ಥಾನ ಮಾತ್ರ ಗೆದ್ದುಕೊಂಡಿತ್ತು.

Advertisement

ಈ ಚುನಾವಣೆಯಲ್ಲಿ ಮೊದಲೇ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌ ಹಾಸನ, ಮಂಡ್ಯ, ಕೋಲಾರದಲ್ಲಿ ಸ್ಪರ್ಧಿಸಿತ್ತು. ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಸೋತರೆ, ಮಂಡ್ಯದಲ್ಲಿ ಎಚ್‌ಡಿ ಕುಮಾರಸ್ವಾಮಿ, ಕೋಲಾರದಲ್ಲಿ ಮಲ್ಲೇಶ್‌ ಬಾಬು ಜಯಗಳಿಸಿದ್ದರು. ಎನ್‌ಡಿಎ ಸರ್ಕಾರದಲ್ಲಿ ಜೆಡಿಎಸ್‌ ಪ್ರಮುಖ ಮಿತ್ರಪಕ್ಷವಾಗಿರುವ ಕಾರಣ ಕುಮಾರಸ್ವಾಮಿ ಅವರಿಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕಿದೆ.  ಅಷ್ಟೇ ಅಲ್ಲದೇ ಮೊದಲ ಬಾರಿಗೆ ಕೇಂದ್ರದಲ್ಲಿ ಕುಮಾರಸ್ವಾಮಿ ಅವರಿಗೆ ಮಂತ್ರಿ ಸ್ಥಾನ ಒಲಿದಿದೆ.  ಜೆಡಿಎಸ್‌ ಯಾವಾಗಲೂ ರೈತರ ಪರ ಇರೋ ಪಕ್ಷ  ಅಂತನೇ ತಮ್ಮ ಅಸ್ತಿತ್ವವನ್ನು ಕಂಡುಕೊಂಡ ಪಕ್ಷ. ಹಾಗಾಗಿ ಈ ಬಾರಿ ಕುಮಾರಣ್ಣನಿಗೆ ಕೃಷಿ ಮಂತ್ರಿ ಸಿಗಬೇಕು ಅನ್ನುವ ನಿರೀಕ್ಷೆ  ರೈತರದ್ದು.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror