ಕಳೆದ ವಾರ ಕೊಂಚ ಮಟ್ಟಿಗೆ ಮಳೆ ಸುರಿಯವ ಲಕ್ಷಣ ಕಂಡುಬಂದಿತ್ತು. ಕೆಲವೆಡೆ ಮಳೆಯೂ ಅಗಿ ಸ್ವಲ್ಪ ಮಟ್ಟಿಗೆ ಕೆಆರ್ ಎಸ್ ಗೆ ನೀರು ಹರಿದು ಬಂದಿತ್ತು. ಆದರೆ ಮಳೆ ನಿರೀಕ್ಷೆಯಲ್ಲಿದ್ದ ಹಳೆ ಮೈಸೂರು ಭಾಗದ ಜನರಿಗೆ ಮತ್ತೆ ನಿರಾಸೆ ಉಂಟಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ನಿಂತ ಹಿನ್ನೆಲೆ ಮೂರೇ ದಿನಕ್ಕೆ ಕೆಆರ್‍ಎಸ್ ಡ್ಯಾಂಗೆ ಒಳಹರಿವು ತೀವ್ರ ಪ್ರಮಾಣದಲ್ಲಿ ಕಡಿಮೆಯಾಗಿದೆ. ಈ ಮೂಲಕ ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಪ್ರಮಾಣ ಗಣನೀಯ ಇಳಿಕೆ ಕಂಡಿದೆ.
ಒಂದು ವೇಳೆ ಮಳೆ ಮುಂದುವರೆದರೆ ಬೆಳೆ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ದೂರಾಗುವ ನಿರೀಕ್ಷೆ ಜನರಲ್ಲಿತ್ತು. ಆದರೆ ಮೂರೇ ದಿನಕ್ಕೆ ಮಳೆರಾಯ ಕೈಕೊಟ್ಟಿದ್ದಾನೆ. ಇಂದರಿಂದ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಕಾವೇರಿ ವಿವಾದ ಮುಂದುವರೆಯುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ.
ಮತ್ತೊಂದೆಡೆ ರಾಜ್ಯ ಸರ್ಕಾರ ಹಾಗೂ ಕಾವೇರಿ ಪ್ರಾಧಿಕಾರದ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆಗಳು ಇಂದು ಸಹ ಮುಂದುವರಿದಿವೆ. 32ನೇ ದಿನಕ್ಕೆ ರೈತ ಹಿತರಕ್ಷಣಾ ಸಮಿತಿಯ ಸತ್ಯಾಗ್ರಹ ಕಾಲಿಟ್ಟಿದೆ. ಇಂದಿನ ಧರಣಿಯಲ್ಲಿ ಪತ್ರಕರ್ತರು ಭಾಗಿಯಾಗಿ ಸರ್ಕಾರದ ಮೇಲೆ ಒತ್ತಡ ಹಾಕಲಿದ್ದಾರೆ. ಕನ್ನಡ ಸೇನೆಯಿಂದಲೂ ಸಂಜಯ ಸರ್ಕಲ್‍ನಿಂದ ವಿಶ್ವೇಶ್ವರಯ್ಯ ಪ್ರತಿಮೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಅತ್ತ ಶ್ರೀರಂಗಪಟ್ಟಣದಲ್ಲೂ ಸಹ ಭೂಮಿ ತಾಯಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
– ಅಂತರ್ಜಾಲ ಮಾಹಿತಿ
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…