ದೇಶದ ಬಡ ಜನರ ಹಸಿವು ನೀಗಿಸಿದ ಗರೀಬ್ ಕಲ್ಯಾಣ್ ಅನ್ನ ಯೋಜನೆ | ಮತ್ತೆ ಮುಂದಿನ ಐದು ವರ್ಷಕ್ಕೆ ವಿಸ್ತರಣೆಗೊಳಿಸಿ ಪ್ರಧಾನಿ ಮೋದಿ ಘೋಷಣೆ

November 4, 2023
5:09 PM

ಪ್ರಪಂಚ ಎಷ್ಟೇ ಮುಂದುವರೆದರೂ ದೇಶದಲ್ಲಿ ಒಂದೊತ್ತಿನ ಕೂಳಿಗಾಗಿ ಪರದಾಡುವ ಅದೆಷ್ಟೋ ಜೀವಗಳಿವೆ. ತಮ್ಮ ದಿನಿತ್ಯದ ಮೂರು ಹೊತ್ತಿನ ಹಸಿವನ್ನು ನೀಗಿಸಲಾಗದೆ ಉಪವಾಸ ಮಲಗುವ ಅದೇಷ್ಟೋ ಕುಟುಂಬಗಳಿವೆ(Family). ಇದನ್ನು ಮನಗಂಡ ಪ್ರಧಾನಿ ನರೇಂದ್ರ ಮೋದಿಯವರು ಕೊರೋನಾ ಕಾಲದಲ್ಲಿ ಬಡವರ ಹಸಿವು ನೀಗಿಸಲು ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಜಾರಿಗೆ ತಂದರು೭. ಇದೀಗ ದೇಶವು ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವ ಹೊತ್ತಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಮಹತ್ವದ ಘೋಷಣೆ ಮಾಡಿದ್ದಾರೆ. ಬಡವರಿಗೆ ಉಚಿತ ಪಡಿತರ ನೀಡುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (Pradhan Mantri Garib Kalyan Anna Yojana) ಮುಂದಿನ ಐದು ವರ್ಷಕ್ಕೆ ವಿಸ್ತರಿಸಲಾಗುವುದು ಎಂದು ಮೋದಿ ಹೇಳಿದರು.

Advertisement
Advertisement

ಛತ್ತೀಸ್‌ಗಢದಲ್ಲಿ (Chattisgarh) ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಘೋಷಣೆ ಮಾಡಿದ್ದಾರೆ. ಬಿಜೆಪಿ (BJP) ಸರ್ಕಾರವು ಮುಂದಿನ 5 ವರ್ಷಗಳವರೆಗೆ ದೇಶದ 80 ಕೋಟಿ ಬಡವರಿಗೆ ಉಚಿತ ಪಡಿತರವನ್ನು ಒದಗಿಸುವ ಯೋಜನೆಯನ್ನು ವಿಸ್ತರಿಸಲು ನಾನು ನಿರ್ಧರಿಸಿದ್ದೇನೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದವು ಯಾವಾಗಲೂ ಪವಿತ್ರ ನಿರ್ಧಾರಗಳನ್ನು ತೆಗೆದುಕೊಳ್ಳಲು ನನಗೆ ಶಕ್ತಿಯನ್ನು ನೀಡುತ್ತದೆ ಎಂದು ತಿಳಿಸಿದರು. ಇದೇ ವೇಳೆ ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಆರ್ಥಿಕ ಲಾಭಗಳಿಗೆ ಆದ್ಯತೆ ನೀಡುತ್ತಿದೆ ಮತ್ತು ಆಗಾಗ ಭ್ರಷ್ಟ ಚಟುವಟಿಕೆಗಳಲ್ಲಿ ತೊಡಗಿದೆ. ಆದರೆ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಸರ್ಕಾರ ದೇಶದ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 2020ರಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಪರಿಚಯಿಸಲಾಯಿತು. ಇದರ ಅಡಿಯಲ್ಲಿ ಸರ್ಕಾರವು ಪ್ರತಿ ವ್ಯಕ್ತಿಗೆ 5 ಕೆಜಿ ಆಹಾರ ಧಾನ್ಯವನ್ನು ಉಚಿತವಾಗಿ ಪೂರೈಸುತ್ತಿದೆ.

ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಶುಕ್ರವಾರ ರಾಯ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಂಬರುವ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆಯನ್ನು (Manifesto) ಬಿಡುಗಡೆ ಮಾಡಿದರು. ‘ಮೋದಿ ಕೀ ಗ್ಯಾರಂಟಿ 2023’ ಎಂಬ ಶೀರ್ಷಿಕೆಯ ಪ್ರಣಾಳಿಕೆಯು ಆರೋಗ್ಯ ವಿಮಾ ಯೋಜನೆಗಳು, ಅಡುಗೆ ಅನಿಲ ಸಬ್ಸಿಡಿಗಳು ಮತ್ತು ರಾಜ್ಯದ ಬಡ ಜನರಿಗೆ ಅಯೋಧ್ಯೆಯ ರಾಮಮಂದಿರಕ್ಕೆ ಪ್ರಾಯೋಜಿತ ಭೇಟಿ ಸೇರಿದಂತೆ ಇತರ ಭರವಸೆಗಳನ್ನು ಒಳಗೊಂಡಿದೆ. ಹೂಡಿಕೆಯನ್ನು ಆಕರ್ಷಿಸುವ ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ‘ಇನ್ವೆಸ್ಟ್ ಛತ್ತೀಸ್‌ಗಢ’ ಉಪಕ್ರಮವು ಪ್ರಣಾಳಿಕೆಯ ಪ್ರಮುಖ ಹೈಲೈಟ್ ಆಗಿದೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸುವ ಮೂಲಕ ಛತ್ತೀಸ್‌ಗಢ ಸಾರ್ವಜನಿಕ ಸೇವಾ ಆಯೋಗಕ್ಕೆ (ಸಿಜಿಪಿಎಸ್‌ಸಿ) ಪಾರದರ್ಶಕತೆಯನ್ನು ತರಲು ಬಿಜೆಪಿ ಯೋಚಿಸಿದೆ.

I have decided to extend the scheme of providing free ration to 80 crore poor people of the country for the next 5 years by the BJP government. Pradhan Mantri Garib Kalyan Anna Yojana was introduced in 2020 during the covid pandemic. Under this, the government is providing free 5 kg of food grains per person. – ಅಂತರ್ಜಾಲ ಮಾಹಿತಿ

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ
July 29, 2025
8:46 PM
by: The Rural Mirror ಸುದ್ದಿಜಾಲ
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ
July 29, 2025
8:34 PM
by: The Rural Mirror ಸುದ್ದಿಜಾಲ
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ
July 29, 2025
8:25 PM
by: The Rural Mirror ಸುದ್ದಿಜಾಲ
ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ
July 29, 2025
8:19 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group