Advertisement
MIRROR FOCUS

ಜ.30 ರಿಂದ ಮೂಡಬಿದ್ರಿಯಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ : | 11 ಜಿಲ್ಲೆಗಳ ಅಭ್ಯರ್ಥಿಗಳಿಗೆ ಅವಕಾಶ

Share

ಮಂಗಳೂರಿನ ಸೇನಾ ನೇಮಕಾತಿ ಕಚೇರಿಯಿಂದ ಜನವರಿ 30 ರಿಂದ ಫೆಬ್ರವರಿ 10ರವರೆಗೆ ಮೂಡಬಿದ್ರಿಯ ಸ್ವರಾಜ್ ಮೈದಾನದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ ನಡೆಯಲಿದೆ.

ರಾಜ್ಯದ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಂದ ಕಿರುಪಟ್ಟಿ ಮಾಡಲಾದ ಅಭ್ಯರ್ಥಿಗಳಿಗಾಗಿ ಈ ರ‍್ಯಾಲಿಯನ್ನು ಆಯೋಜಿಸಲಾಗಿದೆ.

ಜೂನ್ 30, 2025ರಿಂದ ಜುಲೈ 10, 2025ರವರೆಗೆ ನಡೆಸಲಾದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ (CEE)ಯಲ್ಲಿ ಅರ್ಹತೆ ಪಡೆದ ಅಗ್ನಿವೀರ್ ಅರ್ಜಿದಾರರನ್ನು ರ‍್ಯಾಲಿಗೆ ಆಹ್ವಾನಿಸಲಾಗಿದೆ.  ಸೇನೆಯಲ್ಲಿ ಎಲ್ಲಾ ವರ್ಗಗಳ ದಾಖಲಾತಿಗಾಗಿ ಈ ನೇಮಕಾತಿ ರ‍್ಯಾಲಿ ನಡೆಯಲಿದ್ದು, ವಯಸ್ಸು, ಶಿಕ್ಷಣ ಅರ್ಹತೆ, ನೋಂದಣಿ ಸೇರಿದಂತೆ ಇತರ ಮಾನದಂಡಗಳ ವಿವರಗಳನ್ನು ಸೇನಾ ನೇಮಕಾತಿ ಕಚೇರಿ ಪ್ರಕಟಿಸಿದ ಅಧಿಸೂಚನೆಯಲ್ಲಿ ನೀಡಲಾಗಿದೆ.

ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಪ್ರವೇಶ ಕಾರ್ಡ್‌ಗಳನ್ನು ನೀಡಲಾಗಿದ್ದು, ಅವು ಅಭ್ಯರ್ಥಿಗಳ ವೈಯಕ್ತಿಕ ಖಾತೆ ಹಾಗೂ ನೋಂದಾಯಿತ ಇಮೇಲ್ ಐಡಿ ಮೂಲಕ ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

ಆಯ್ಕೆ ಪ್ರಕ್ರಿಯೆ ಆನ್‌ಲೈನ್ CEEಯಲ್ಲಿನ ಕಾರ್ಯಕ್ಷಮತೆ, ನೇಮಕಾತಿ ರ‍್ಯಾಲಿಯಲ್ಲಿ ನಡೆಯುವ ಪರೀಕ್ಷೆಗಳು ಹಾಗೂ ಅಂತಿಮ ಅರ್ಹತೆಯ ಆಧಾರದ ಮೇಲೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

42 minutes ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

58 minutes ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

1 hour ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

9 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

19 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

24 hours ago