ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಜಿಕೆವಿಕೆ ಆವರಣದಲ್ಲಿ ನವೆಂಬರ್ 14 ರಿಂದ 17 ರವರೆಗೂ ಈ ಬಾರಿಯ ಕೃಷಿ ಮೇಳವನ್ನು ಆಯೋಜಿಸಲಾಗಿದೆ ಎಂದು ಕುಲಪತಿ ಡಾ.ಎಸ್. ವಿ. ಸುರೇಶ ತಿಳಿಸಿದ್ದಾರೆ.
‘ಹವಾಮಾನ ಚತುರ ಡಿಜಿಟಲ್ ಕೃಷಿ’ ಘೋಷವಾಕ್ಯದೊಂದಿಗೆ ಆಯೋಜಿಸಲಾಗುತ್ತಿರುವ ಕೃಷಿ ಮೇಳದಲ್ಲಿ ವಿವಿಧ ಹೊಸ ತಳಿಗಳ ಪ್ರಾತ್ಯಕ್ಷಿಕೆ, ಸುಧಾರಿತ ಕೃಷಿ ಯಂತ್ರೋಪಕರಣಗಳು ಪ್ರದರ್ಶನ, ಕೃಷಿ ಪರಿಕರಗಳ ಹಾಗೂ ಪ್ರಕಟಣೆಗಳ ಮಾರಾಟ ಮತ್ತಿತರ ವ್ಯವಸ್ಥೆಗಳ ಮೂಲಕ ಆಧುನಿಕ ಬೇಸಾಯದ ಬಗ್ಗೆ ರೈತರಲ್ಲಿ ಅರಿವು ಮೂಡಿಸಲಾಗುವುದು ಎಂದರು. ಇದೇ ವೇಳೆ ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿದ ರೈತರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel