ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಅಂದರೆ ಮನೆ ಕಟ್ಟಲು, ಫ್ಯಾಕ್ಟರಿ ಅಥವಾ ಶಾಲೆ ಕಟ್ಟಲು ಅನುಮತಿಗಾಗಿ ತಾಲೂಕು ಆಫೀಸು, ಜಿಲ್ಲಾಧಿಕಾರಿ ಕಚೇರಿ ಅಲೆದಾwಬೇಕಿತ್ತು. ಇದಕ್ಕಾಗಿ ಇನ್ನುಮಂದೆ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳಗೊಳಿಸಲು ಕರ್ನಾಟಕ ರಾಜ್ಯ ಸರಕಾರವು ʼಕರ್ನಾಟಕ ಭೂ ಕಂದಾಯ ನಿಯಮಗಳು-2025ʼ ಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಭೂ ಮಾಲೀಕರು ಇನ್ನು ಕೇವಲ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ, ನಿಗದಿಪಡಿಸಿದ ಶುಲ್ಕ ಪಾವತಿಸಿದರೆ ಸಾಕು. ಇದು 30 ದಿನದ ಒಳಗೆ ಆಗಬಹುದು. ಜಿಲ್ಲಾಧಿಕಾರಿಗಳು 30 ದಿನಗಳ ಒಳಗಾಗಿ ಸಂಬಂಧಿತ ಯಾವುದೇ ಇಲಾಖೆಯ ಜೊತೆಗೆ ಚರ್ಚಿಸಿ ಭೂ ಪರಿವರ್ತನೆ ಅವಕಾಶ ನೀಡಬಹುದು ಅಥವಾ ತಿರಸ್ಕರಿಸಬಹುದು. 30 ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಯಾವ ನಿರ್ಧಾರವೂ ತೆಗೆದುಕೊಳ್ಳದಿದ್ದಲ್ಲಿ, ಸ್ವಯಂ ಚಾಲಿತವಾಗಿ ಭೂ ಪರಿವರ್ತನೆ ಅವಕಾಶ ಲಭ್ಯವಾಗುತ್ತದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

