ನ.23 | ಗುತ್ತಿಗಾರು ಸಹಕಾರಿ ಸಂಘದ ಶತಮಾನೋತ್ಸವ | ಕೃಷಿ ವಿಚಾರಗೋಷ್ಠಿ | ಅಡಿಕೆ ರೋಗಗಳ ಬಗ್ಗೆ ಮಾಹಿತಿ ವಿನಿಮಯ |

November 22, 2024
2:32 PM

ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ ನ.23 ರಂದು ನಡೆಯಲಿದೆ. ಶತಮಾನೋತ್ಸವ ಕಾರ್ಯಕ್ರಮವನ್ನು ಬೆಳಗ್ಗೆ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಉದ್ಘಾಟಿಸುವರು. ಸಭಾಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್‌ ದಂಬೆಕೋಡಿ ವಹಿಸುವರು.…..ಮುಂದೆ ಓದಿ….

ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 2.30 ರಿಂದ ಕೃಷಿ ವಿಚಾರಗೋಷ್ಟಿ ನಡೆಯಲಿದೆ. ಕೃಷಿ ಗೋಷ್ಠಿಯಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳಾದ ಡಾ.ವಿನಾಯಕ ಹೆಗಡೆ, ಡಾ.ಭವಿಷ್ಯ , ಕೃಷಿಕರಾದ ಸುರೇಶ್ಚಂದ್ರ ತೊಟ್ಟೆತ್ತೋಡಿ, ಶಂಕರ್‌ ಪ್ರಸಾದ್‌ ರೈ ಸಂಪಾಜೆ, ಯುವಕೃಷಿಕ ವರದರಾಜ್‌ ಭಾಗವಹಿಸುವರು.

ಸುಳ್ಯ ತಾಲೂಕಿನ ಗುತ್ತಿಗಾರು ಸಹಕಾರಿ ಸಂಘವು ಶತಮಾನೋತ್ಸವ ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ ನಡೆಯುವ  ಶತಮಾನೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ವಿಧಾನಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ, ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲು, ಮಾಜಿ ಸಚಿವ ಎಸ್‌ ಅಂಗಾರ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಶಶಿಕುಮಾರ್‌ ಬಾಲ್ಯೊಟ್ಟು, ಎಸ್‌ ಎನ್‌ ಮನ್ಮಥ, ಪ್ರಮುಖರಾದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಅಧ್ಯಕ್ಷ  ಭರತ್‌ ಮುಂಡೋಡಿ, ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ್‌ ಮಡ್ತಿಲ, ಗುತ್ತಿಗಾರು ಗ್ರಾಪಂ ಅಧ್ಯಕ್ಷೆ ಸುಮಿತ್ರ ಮೂಕಮಲೆ, ದೇವಚಳ್ಳ ಗ್ರಾಪಂ ಅಧ್ಯಕ್ಷ ಶೈಲೇಶ್‌ ಅಂಬೆಕಲ್ಲು, ರಬ್ಬರ್‌ ಬೆಳೆಗಾರರ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗುತ್ತಿಗಾರು ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಮುಳಿಯ ತಿಮ್ಮಪ್ಪಯ್ಯ ಭಾಗವಹಿಸುವರು.

ಸಂಜೆ 7 ರಿಂದ ಲಕುಮಿ ತಂಡದಿಂದ  “ಒರಿಯಾಂಡಲಾ ಸರಿಬೋಡು” ತುಳುನಾಟಕ ನಡೆಯಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror