ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ ನ.23 ರಂದು ನಡೆಯಲಿದೆ. ಶತಮಾನೋತ್ಸವ ಕಾರ್ಯಕ್ರಮವನ್ನು ಬೆಳಗ್ಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸುವರು. ಸಭಾಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ವಹಿಸುವರು.…..ಮುಂದೆ ಓದಿ….
ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 2.30 ರಿಂದ ಕೃಷಿ ವಿಚಾರಗೋಷ್ಟಿ ನಡೆಯಲಿದೆ. ಕೃಷಿ ಗೋಷ್ಠಿಯಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳಾದ ಡಾ.ವಿನಾಯಕ ಹೆಗಡೆ, ಡಾ.ಭವಿಷ್ಯ , ಕೃಷಿಕರಾದ ಸುರೇಶ್ಚಂದ್ರ ತೊಟ್ಟೆತ್ತೋಡಿ, ಶಂಕರ್ ಪ್ರಸಾದ್ ರೈ ಸಂಪಾಜೆ, ಯುವಕೃಷಿಕ ವರದರಾಜ್ ಭಾಗವಹಿಸುವರು.
ಸುಳ್ಯ ತಾಲೂಕಿನ ಗುತ್ತಿಗಾರು ಸಹಕಾರಿ ಸಂಘವು ಶತಮಾನೋತ್ಸವ ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ ನಡೆಯುವ ಶತಮಾನೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಎಸ್ ಅಂಗಾರ, ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು, ಎಸ್ ಎನ್ ಮನ್ಮಥ, ಪ್ರಮುಖರಾದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಅಧ್ಯಕ್ಷ ಭರತ್ ಮುಂಡೋಡಿ, ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ, ಗುತ್ತಿಗಾರು ಗ್ರಾಪಂ ಅಧ್ಯಕ್ಷೆ ಸುಮಿತ್ರ ಮೂಕಮಲೆ, ದೇವಚಳ್ಳ ಗ್ರಾಪಂ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ರಬ್ಬರ್ ಬೆಳೆಗಾರರ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗುತ್ತಿಗಾರು ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಮುಳಿಯ ತಿಮ್ಮಪ್ಪಯ್ಯ ಭಾಗವಹಿಸುವರು.
ಸಂಜೆ 7 ರಿಂದ ಲಕುಮಿ ತಂಡದಿಂದ “ಒರಿಯಾಂಡಲಾ ಸರಿಬೋಡು” ತುಳುನಾಟಕ ನಡೆಯಲಿದೆ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…