Advertisement
ಸುದ್ದಿಗಳು

ಸುಳ್ಯ ತಾಲೂಕಿನ ಸಂಜೀವಿನಿ ಎನ್ ಆರ್ ಎಲ್ ಎಂ ಕೃಷಿ ಸಖಿಯರು, ಕೃಷಿಕರು ಹಾಗೂ ಸಂಜೀವಿನಿ ಸದಸ್ಯೆಯರಿಗೆ ಕೃಷಿ ಅಧ್ಯಯನ ಪ್ರವಾಸ ಮತ್ತು ಮಾಹಿತಿ ತರಬೇತಿ

Share

ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ಭಾ. ಕೃ. ಅ. ಸಂಸ್ಥೆ) ಕೇಂದ್ರ, ವಿಟ್ಲ,  3F ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್, ರೇಷ್ಮೆ ಕೃಷಿ ಅಭಿವೃದ್ಧಿ ನಿಗಮ, ಮಂಗಳೂರು ಹಾಗೂ ಸಂಜೀವಿನಿ ಎನ್‌ಆರ್‌ಎಲ್‌ಎಂ ತಾಲೂಕು ಪಂಚಾಯತ್ ಸುಳ್ಯ ಇವರ ಸಹಯೋಗದಲ್ಲಿ ರೇಷ್ಮೆ ಕೃಷಿ ಮಾಹಿತಿ ಹಾಗೂ ತಾಳೆ ಕೃಷಿ ಕ್ಷೇತ್ರ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Advertisement
Advertisement

ಕಾರ್ಯಕ್ರಮದಲ್ಲಿ ಭಾ. ಕೃ. ಅ. ಸಂಸ್ಥೆ ಕೇಂದ್ರ, ವಿಟ್ಲದ ವ್ಯವಸ್ಥಾಪನಾ ನಿರ್ದೇಶಕರಾದ ಎಂ. ಪ್ರಸಾದ್ ಶೆಟ್ಟಿ, ನಿವೃತ್ತ ರೇಷ್ಮೆ ನಿರೀಕ್ಷಕರಾದ ಬಿ.ಕೆ. ನಾಯಕ್, ರೇಷ್ಮೆ ವಿಸ್ತರಣಾಧಿಕಾರಿ ಶಾಂಭವಿ ಹೆಚ್ (ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು), ರೇಷ್ಮೆ ನಿರೀಕ್ಷಕರಾದ ಹೇಮಾ (ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು), 3F ಆಯಿಲ್ ಪಾಮ್ ಪ್ರೈ. ಲಿ., ಉಡುಪಿಯ ಏರಿಯಾ ಮ್ಯಾನೇಜರ್ ಕೃಷ್ಣಾ ವೈ.ಟಿ., ಸಂಜೀವಿನಿ ಕ್ಲಸ್ಟರ್ ಅಧಿಕಾರಿಗಳಾದ ರವಿಶಂಕರ್ (ಸುಳ್ಯ ತಾಲೂಕು) ಹಾಗೂ ರಾಬರ್ಟ್ (ಬಂಟ್ವಾಳ–ಬೆಳ್ತಂಗಡಿ ತಾಲೂಕು) ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅಧಿಕಾರಿಗಳು, ಕೃಷಿ ಭೂಮಿ ಹೊಂದಿರುವವರು ಹಾಗೂ ಅಲ್ಪ ಜಾಗವಿರುವವರಿಗೂ ರೇಷ್ಮೆ ಕೃಷಿ ಕೈಗೊಳ್ಳಲು ಅವಕಾಶವಿದ್ದು, ಉತ್ತಮ ಆದಾಯ ಗಳಿಸಲು ಸಾಧ್ಯವಿದೆ ಎಂದು ತಿಳಿಸಿದರು. ಹೆಚ್ಚಿನ ಭೂಮಿ ಹೊಂದಿರುವ ಕೃಷಿಕರಿಗೆ ತಾಳೆ ಕೃಷಿ ಮಾಡಲು ಅವಕಾಶವಿದ್ದು, ಸಂಬಂಧಿತ ಇಲಾಖೆಗಳಿಂದ ಎಲ್ಲಾ ರೀತಿಯ ಸಹಕಾರ ಲಭ್ಯವಿರುತ್ತದೆ ಎಂದರು. ರೇಷ್ಮೆ ಬೆಳೆಗಾರರಿಗೆ ಉತ್ಪನ್ನಗಳ ಮಾರಾಟ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಅಗತ್ಯ ತಾಂತ್ರಿಕ ಮಾರ್ಗದರ್ಶನ ಹಾಗೂ ಸಲಕರಣೆಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ತಾಳೆ ಬೆಳೆ ಈಗಾಗಲೇ ಹಲವು ಕಡೆಗಳಲ್ಲಿ ಬೆಳೆಸಲಾಗುತ್ತಿದ್ದು, ಅದರ ಮಾರಾಟ ವ್ಯವಸ್ಥೆಯೂ ಇದೆ ಎಂದು ತಿಳಿಸಿದರು. ಬಂಟ್ವಾಳ ತಾಲೂಕಿನ ತಾಳೆ ಕೃಷಿಕರಾದ ಗೋವಿಂದ ಭಟ್ ಇಡುಕ್ಕಿ ಹಾಗೂ ಬಿ. ಬಾಲಕೃಷ್ಣ ಭಟ್  ತೋಟಕ್ಕೆ ಭೇಟಿ ಮಾಡಿಸಲಾಯಿತು.

ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ವ್ಯವಸ್ಥಾಪನಾ ನಿರ್ದೇಶಕರು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಕೃಷಿಕರಿಗಾಗಿ ಇರುವ ವಿವಿಧ ಯೋಜನೆಗಳು, ಸವಲತ್ತುಗಳು, ಕೃಷಿ ಸಲಕರಣಿಗಳು, ಸಬ್ಸಿಡಿಯಲ್ಲಿ ಸಿಗಬಹುದಾದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಐ ಐ ಹೆಚ್ ಆರ್ ಬೆಂಗಳೂರುನ ವಿಜ್ಞಾನಿಗಳು ಸಂಶೋಧಿಸಿ ಅಭಿವೃದ್ಧಿ ಪಡಿಸಿದ ಜೈವಿಕ ಪೋಷಕಾಂಶವುಳ್ಳ ಗೊಬ್ಬರವನ್ನು ಕೃಷಿಕರಿಗೆ ಉಚಿತವಾಗಿ ಸಂಸ್ಥೆಯಿಂದ ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಕೃಷಿಕರು, ಬಟ್ಟೆಕಜೆ ರಾಜೇಶ್ ಮತ್ತು ಕೃಷಿಸಖಿಯರಾದ ಪುಷ್ಪಲತಾ ಮಡಪ್ಪಾಡಿ, ಕನಕ ಮಜಲು ಪ್ರೇಮಾ ಅಡ್ಕಾರು, ಜಾಲ್ಸೂರು ವಿಜಯಾ, ಅಜ್ಜಾವರ ಪೂರ್ಣಿಮಾ, ಆಲೆಟ್ಟಿ ಲೋಚನ ಮತ್ತು ಸಂಪಾಜೆ ಗ್ರಾಮದ ಕೃಷಿ ಸಖಿ ಮೋಹಿನಿ ವಿಶ್ವನಾಥ್ ( ನಿಶಾ ) ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

5 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

12 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

19 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

19 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

19 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

20 hours ago