ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.………ಮುಂದೆ ಓದಿ……..
ವಿಧಾನಸೌಧದಲ್ಲಿ ರಾಜ್ಯದ ವಿವಿಧ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ರೈತರ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು. ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆ ಮತ್ತು ಪ್ರಾತ್ಯಕ್ಷಿಕೆಗಳಿಗೆ ಇನ್ನಷ್ಟು ಹೆಚ್ಚು ಆದ್ಯತೆ ನೀಡಬೇಕು. ರೈತರನ್ನು ತಾಂತ್ರಿಕವಾಗಿ ಸಶಕ್ತರನ್ನಾಗಿ ಮಾಡಿ ಕೃಷಿ ಕ್ಷೇತ್ರವನ್ನು ಸದೃಢಗೊಳಿಸಬೇಕು ಎಂದು ನಿರ್ದೇಶನ ನೀಡಿದರು. ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು ಎದುರಿಸುತ್ತಿರುವ ತಾಂತ್ರಿಕ, ಆಡಳಿತಾತ್ಮಕ ಮತ್ತು ಆರ್ಥಿಕ ಸಮಸ್ಯೆ ಹಾಗೂ ಸವಾಲುಗಳನ್ನು ಕುರಿತು ಆದ್ಯತೆ ಮೇರೆಗೆ ಪಟ್ಟಿ ಮಾಡಿ ಪ್ರಸ್ತಾವನೆ ಸಿದ್ದಪಡಿಸುವಂತೆ ಸೂಚಿಸಿದ ಸಚಿವರು ಈ ಬಗ್ಗೆ ಮಾರ್ಚ್ ನಂತರ ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.