ನಮ್ಮ ದೇಶ ಹಾಗೂ ರಾಜ್ಯದ ಕೃಷಿ ಇಳುವರಿ ಇತರೇ ದೇಶಗಳಿಗೆ ಹೋಲಿಸಿದರೆ ನಿಗದಿತ ಪ್ರಮಾಣದಲ್ಲಿ ಏರಿಕೆಯಾಗದೆ ಇರುವ ಬಗ್ಗೆ ಕೃಷಿ ವಿಜ್ಞಾನಿಗಳು ಪರಿಶೀಲನೆ ನಡೆಸಬೇಕೆಂದು ರಾಜ್ಯ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ತಿಳಿಸಿದ್ದಾರೆ.
ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದು 24ನೇ ಸಾಲಿನ ಕೃಷಿ ಮೇಳ ಉದ್ಘಾಟಿಸಿ ಸಾಧಕ ಕೃಷಿಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಕೃಷಿ ವಿಜ್ಞಾನಿಗಳು ರೈತರ ಸಮಸ್ಯೆ ಆಲಿಸಿ ಪರಿಹಾರ ನೀಡಬೇಕು. ಜಿಲ್ಲೆಯಲ್ಲಿ ಕೃಷಿ ಸಮಸ್ಯೆಗಳ ಹಾಗೂ ಪರಿಹಾರಗಳ ಬಗ್ಗೆ ಜಿಲ್ಲಾಡಳಿತದ ಜೊತೆ ಆಗಾಗ್ಗೆ ಚರ್ಚಿಸಬೇಕು. ಕಂದಾಯ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಜೊತೆಗೂಡಿ ಸಹಕಾರದಿಂದ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.
ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ಕೃಷಿಯಿಂದ ದೂರವಾಗುತ್ತಿದ್ದು, ಕೃಷಿ ಕಾರ್ಮಿಕರು ದೊರೆಯುತ್ತಿಲ್ಲವೆಂದು ಕಳವಳ ವ್ಯಕ್ತಪಡಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel