ಅಕಾಲಿಕ ಮಳೆಗೆ ಕೃಷಿ ಹಾನಿ | ರಾಜ್ಯಗಳ ವರದಿಯ ನಿರೀಕ್ಷೆ | ಕನಿಷ್ಟ ಬೆಂಬಲ ಬೆಲೆ ಘೋಷಣೆ |

October 16, 2022
10:35 PM

ಅಕಾಲಿಕ ಮಳೆಯಿಂದ ದೇಶದಲ್ಲಿ ಬೆಳೆ ಹಾನಿಯಾಗಿದೆ. ಹೀಗಾಗಿ ರಾಜ್ಯಗಳಿಂದ ಕೃಷಿ ಹಾನಿಯ ಪ್ರಮಾಣದ ಬಗ್ಗೆ ವರದಿಗಾಗಿ ಕಾಯುತ್ತಿದ್ದೇವೆ. ವರದಿಯ ಬಳಿಕ ಕನಿಷ್ಟ ಬೆಂಬಲ ಬೆಲೆ ಘೋಷಣೆ ಮಾಡಲಾಗುವುದು  ಎಂದು ಕೃಷಿ ಸಚಿವ ನರೇಂದ್ರ ಸಿಂಗ್‌ ಥೋಮರ್‌ ಹೇಳಿದ್ದಾರೆ.

ಅಕಾಲಿಕ ಮಳೆಯಿಂದಾಗಿ ಆಹಾರ ಬೆಳೆಗಳ ಸಹಿತ ವಿವಿಧ ಬೆಳೆಗಳು ಹಾನಿಗೊಳಗಾಗಿವೆ. ಈ ಬಗ್ಗೆ ಸಮೀಕ್ಷೆ ನಡೆಯುತ್ತಿದೆ. ರೈತರು ಮುಂಗಾರು ಮಳೆಯ ಮೇಲೆ ಅವಲಂಬಿತರಾಗಿದ್ದಾರೆ. ಆದರೆ ಅನಿರೀಕ್ಷಿತವಾಗಿ ಮಳೆಯ ಕಾರಣದಿಂದ ಬೆಳೆ ಹಾನಿಯಾಗಿದೆ. ಹೀಗಾಗಿ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಅವರು ಹೇಳಿದರು.ಹಿಂಗಾರು ಬೆಳೆಗಳು, ವಿಶೇಷವಾಗಿ ಎಣ್ಣೆಕಾಳುಗಳು ಮತ್ತು ದ್ವಿದಳ ಧಾನ್ಯಗಳ ಬಿತ್ತನೆಯು ದೇಶಾದ್ಯಂತ ಪ್ರಾರಂಭವಾಗಿದೆ ಮತ್ತು ಇದುವರೆಗೆ ಸುಮಾರು 7.34 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ ಎಂದು ಥೋಮರ್‌ ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror