ಅಕಾಲಿಕ ಮಳೆಯಿಂದ ದೇಶದಲ್ಲಿ ಬೆಳೆ ಹಾನಿಯಾಗಿದೆ. ಹೀಗಾಗಿ ರಾಜ್ಯಗಳಿಂದ ಕೃಷಿ ಹಾನಿಯ ಪ್ರಮಾಣದ ಬಗ್ಗೆ ವರದಿಗಾಗಿ ಕಾಯುತ್ತಿದ್ದೇವೆ. ವರದಿಯ ಬಳಿಕ ಕನಿಷ್ಟ ಬೆಂಬಲ ಬೆಲೆ ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಹೇಳಿದ್ದಾರೆ.
ಅಕಾಲಿಕ ಮಳೆಯಿಂದಾಗಿ ಆಹಾರ ಬೆಳೆಗಳ ಸಹಿತ ವಿವಿಧ ಬೆಳೆಗಳು ಹಾನಿಗೊಳಗಾಗಿವೆ. ಈ ಬಗ್ಗೆ ಸಮೀಕ್ಷೆ ನಡೆಯುತ್ತಿದೆ. ರೈತರು ಮುಂಗಾರು ಮಳೆಯ ಮೇಲೆ ಅವಲಂಬಿತರಾಗಿದ್ದಾರೆ. ಆದರೆ ಅನಿರೀಕ್ಷಿತವಾಗಿ ಮಳೆಯ ಕಾರಣದಿಂದ ಬೆಳೆ ಹಾನಿಯಾಗಿದೆ. ಹೀಗಾಗಿ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಅವರು ಹೇಳಿದರು.ಹಿಂಗಾರು ಬೆಳೆಗಳು, ವಿಶೇಷವಾಗಿ ಎಣ್ಣೆಕಾಳುಗಳು ಮತ್ತು ದ್ವಿದಳ ಧಾನ್ಯಗಳ ಬಿತ್ತನೆಯು ದೇಶಾದ್ಯಂತ ಪ್ರಾರಂಭವಾಗಿದೆ ಮತ್ತು ಇದುವರೆಗೆ ಸುಮಾರು 7.34 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ ಎಂದು ಥೋಮರ್ ಹೇಳಿದರು.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…