ರೈತರ ಕೃಷಿ ಭಾಗ್ಯಕ್ಕಾಗಿ ನೂರು ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಹಬ್ ಯೋಜನೆ | ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ

October 14, 2023
8:46 PM
ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಕೃಷಿಋಷಿಗಳಾದ ರೈತರ ಕಲ್ಯಾಣಕ್ಕಾಗಿ ಕೃಷಿಭಾಗ್ಯದ ಮೂಲಕ ಸರ್ಕಾರದ ವತಿಯಿಂದ ನೂರು ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಹಬ್ ಯೋಜನೆ ಸದ್ಯದಲ್ಲೇ ಪ್ರಾರಂಭಿಸಲಿದ್ದು ರೈತರ ಮನೆ ಬಾಗಿಲಿಗೆ ಕೃಷಿ ಯಂತ್ರೋಪಕರಣಗಳ ಸೇವಾ ಸೌಲಭ್ಯ ಒದಗಿಸಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ ಹೇಳಿದರು.

ಅವರು ಶನಿವಾರ ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ವಿತರಿಸಿ ಮಾತನಾಡಿದರು.

ನೂರು ಕೋಟಿ ರೂ. ವೆಚ್ಚದ ಯೋಜನೆಯಲ್ಲಿ ಶೇ. 70 ರಷ್ಟು ಹಣ ಸರ್ಕಾರ ಭರಿಸುತ್ತದೆ. ಉಳಿದ ಶೇ. 30 ಹಣವನ್ನು ಖಾಸಗಿ ಸಂಸ್ಥೆಗಳು ಭರಿಸಬೇಕಾಗುತ್ತದೆ. ಖಾಸಗಿ ಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ಈ ಯೋಜನೆ ಶೀಘ್ರ ಅನುಷ್ಠಾನಗೊಂಡು ರೈತರ ಭಾಗ್ಯದ ಬಾಗಿಲು ತೆರೆಯಲಿದೆ ಈ ಬಗ್ಗೆ ಸರ್ಕಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಸಕ್ರಿಯ ಸಹಕಾರವನ್ನು ಸಚಿವರು ಕೋರಿದರು.

ಶುಭಾಶಂಸನೆ ಮಾಡಿದ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯ ಹವಾಮಾನ ವೈಪರೀತ್ಯ ಮತ್ತು ಅವಶ್ಯಕತೆಗಳನ್ನು ಗಮನಿಸಿ ಸರ್ಕಾರದ ನಿಯಮಾವಳಿಗಳಲ್ಲಿ ಸಡಿಲಿಕೆ ಮಾಡಬೇಕು. ಕೇರಳದಲ್ಲಿ ಭತ್ತದ ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಕರ್ನಾಟಕದಲ್ಲಿಯೂ ಕೃಷಿಗೆ ಬೆಂಬಲ ಬೆಲೆ ನೀಡಬೇಕೆಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಕೃಷಿಯಲ್ಲಿ ಆದಾಯಕ್ಕಿಂತ ವೆಚ್ಚ ಜಾಸ್ತಿ ಆಗುವುದರಿಂದ ರೈತರು ಭತ್ತದ ಕೃಷಿಯಿಂದ ವಿಮುಖರಾಗಿ ತೆಂಗು, ಅಡಿಕೆ, ರಬ್ಬರ್ ಮೊದಲಾದ ವಾಣಿಜ್ಯ ಬೆಳೆಗಳನ್ನು ಬೆಳೆಸುತ್ತಾರೆ. ಆದರೆ ಈಗ ಕೃಷಿ ಯಂತ್ರೋಪಕರಣಗಳ ಬಳಕೆಯಿಂದ ಕೃಷಿಯೂ ಲಾಭದಾಯಕವಾಗಿದೆ ಎಂದು ಹೆಗ್ಗಡೆಯವರು ಅಭಿಪ್ರಾಯಪಟ್ಟರು.ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಎಲ್ಲಾ ಯೋಜನೆಗಳು ಯಶಸ್ವಿಯಾಗುತ್ತವೆ. ಸರ್ಕಾರದ ಎಲ್ಲಾ ಭಾಗ್ಯಗಳ ಜೊತೆಗೆ ರೈತರಿಗೆ “ಕೃಷಿ ಭಾಗ್ಯ”ವೂ ದೊರಕಿ ರೈತರ ಭಾಗ್ಯದ ಬಾಗಿಲು ತೆರೆಯುವಂತಾಗಲಿ ಎಂದು ಹೆಗ್ಗಡೆಯವರು ಹಾರೈಸಿದರು.

ಹೇಮಾವತಿ ಹೆಗ್ಗಡೆಯವರು ಕೃಷಿ ಕಾರ್ಯಕ್ರಮಗಳ ವಾರ್ಷಿಕ ವರದಿ ಬಿಡುಗಡೆಗೊಳಿಸಿದರು. ಡಿ. ಹರ್ಷೇಂದ್ರ ಕುಮಾರ್ ಕೃಷಿ ವಿಸ್ತರಣಾ ಕಾರ್ಯಕ್ರಮಗಳ ಮಾಹಿತಿ ಪತ್ರ ಬಿಡುಗಡೆಗೊಳಿಸಿದರು.

ಧನಲಕ್ಷ್ಮಿ ಚೆಲುವರಾಯಸ್ವಾಮಿ, ಸಂಪತ್‌ಸಾಮ್ರಾಜ್ಯ ಶಿರ್ತಾಡಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆಂಪೇಗೌಡ ಮತ್ತು ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿಮಲ ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಸ್ವಾಗತಿಸಿದರು. ಯೋಜನಾಧಿಕಾರಿ ಸುರೇಂದ್ರ ವಂದಿಸಿದರು. ಕೃಷಿ ಅಧಿಕಾರಿ ರಾಮ್‌ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror