ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

July 31, 2022
3:13 PM

ಪ್ರಸಕ್ತ ಸಾಲಿನ ಕೃಷಿ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಗೆ ಪತ್ಯೇಕವಾಗಿ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ರೈತರಿಗೆ 100 ರೂ.ಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ 25 ರೂಗಳ ನೋಂದಣಿ ಶುಲ್ಕವಿದ್ದು, ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧಾ ಬೆಳೆ ಬೆಳೆದಿರಬೇಕು ಹಾಗೂ ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ ಹೊಂದಿರಬೇಕು.

ನಿಬಂಧನೆಗಳು ಇದು...

ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ಪಡೆದ ರೈತ, ರೈತ ಕುಟುಂಬದವರು ಮುಂದಿನ ಐದು ವರ್ಷಗಳ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆಯ ಬಹುಮಾನಕ್ಕೆ ಅರ್ಹರಾಗಿರುವುದಿಲ್ಲ, ಆದರೆ ಆ ಬೆಳೆಯ ಮೇಲಿನ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ತಾಲೂಕು ಮಟ್ಟದಲ್ಲಿ ಬಹುಮಾನ ಪಡೆದವರು ಜಿಲ್ಲಾ ಮಟ್ಟಕ್ಕೆ ಹಾಗೂ ಜಿಲ್ಲಾ ಮಟ್ಟದಲ್ಲಿ ಬಹುಮಾನ ಪಡೆದವರು ರಾಜ್ಯ ಮಟ್ಟಕ್ಕೆ ಸ್ಪರ್ಧಿಸಬಹುದು. ಆದರೆ ಕೆಳ ಹಂತದ ಸ್ಪರ್ಧೆಗೆ ಸ್ಪರ್ಧಿಸುವಂತಿಲ್ಲ. ಕಟಾವಿಗೆ 15 ದಿನಗಳ ಮುಂಚಿತವಾಗಿ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಕಟಾವು ದಿನಾಂಕ ತಿಳಿಸಬೇಕು.

ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ ರೈತರು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆ ಪಡೆದು ಕಂದಾಯ ಇಲಾಖೆಯಿಂದ ಪಡೆದ ಪಹಣಿ ಪತ್ರದೊಂದಿಗೆ ಶುಲ್ಕ ಪಾವತಿಸಿ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್
ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!
April 8, 2026
10:24 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror