ಶಿವಮೊಗ್ಗ ಜಿಲ್ಲೆಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜಿಲ್ಲಾಮಟ್ಟದ ಪ್ರಗತಿಪರ ರೈತ ಮತ್ತು ರೈತ ಮಹಿಳೆಯರಿಗೆ ಶಿವಮೊಗ್ಗದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಪ್ರಶಸ್ತಿ ನೀಡಲು ಅರ್ಜಿ ಅಹ್ವಾನಿಸಲಾಗಿದೆ.
ಸಮಗ್ರ ಕೃಷಿ ಪದ್ದತಿಯನ್ನು ಅಳವಡಿಸಿಕೊಂಡಿರುವ ರೈತ ಹಾಗೂ ರೈತ ಮಹಿಳೆಯರನ್ನು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಪ್ರತಿ ಜಿಲ್ಲೆಗೆ ಒಬ್ಬರಂತೆ ಗುರುತಿಸಿ ಗೌರವಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿಪರ ರೈತರು ಮತ್ತು ರೈತ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಅರ್ಹರು ಮಂಗಳೂರಿನ ಎಕ್ಕೂರಿನಲ್ಲಿರುವ ಕೃಷಿ ವಿಜ್ಞಾನ ಕೇಂದ್ರ ಅಥವಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು, ಸೂಕ್ತ ಛಾಯಚಿತ್ರ ಮತ್ತು ದಾಖಲಾತಿಯೊಂದಿಗೆ ಅದೇ ಕಚೇರಿಗೆ ಇದೇ ಜ.31ರೊಳಗೆ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗೆ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದ ದೂ.ಸಂಖ್ಯೆ:0824-2431872, 8794706468, 9480838202 ಅನ್ನು ಸಂಪರ್ಕಿಸಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಪ್ರಕಟಣೆ ತಿಳಿಸಿದೆ.
‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…
ಮೇಘಾಲಯ ಅಡಿಕೆಗೆ ಜಿಐ ಟ್ಯಾಗ್ ಪಡೆಯಲು ಅರ್ಜಿ ಸಲ್ಲಿಸಿರುವ ಬೆಳವಣಿಗೆ ಅಡಿಕೆಯ ಭೌಗೋಳಿಕ…
ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…
ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…
ಹಾಲಿನ ದರವನ್ನು ₹12 ಹೆಚ್ಚಿಸುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿದ್ದಾರೆ.…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…