ರೈತರ ಕಲ್ಯಾಣಕ್ಕಾಗಿ ಹಲವು ಸುಧಾರಣೆಗಳನ್ನು ತರಲಾಗುತ್ತಿದೆ. ಈ ಹಿಂದಿನ ರೈತ ಕಾನೂನುಗಳು ಜಟಿಲಾಗಿದ್ದವು ರೈತರಿಗೆ ಅನುಕೂಲವಾಗುತ್ತಿರಲಿಲ್ಲ. ಈಗ ಸತತವಾಗಿ ಕಾನೂನು ಬದಲಾಯಿಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ರೈತರ ದಾರಿ ತಪ್ಪಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾಗಿ ತಿಳಿಸಿದ್ದಾರೆ.
ದೆಹಲಿಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯ ಸ್ಥಾಪನೆ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನೂತನ ಕೃಷಿ ಮಸೂದೆ, ಅದರ ಅಗತ್ಯದ ಬಗ್ಗೆ, ಮಸೂದೆಯಲ್ಲಿ ಏನಿದೆ ಎಂದು ರೈತರಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ತಿಳಿಸಿಹೇಳುವ ಕೆಲಸ ಈಗ ಆಗಬೇಕು. ಇದಕ್ಕಾಗಿ ಬಿಜೆಪಿ ಕಾರ್ಯಕರ್ತರು ತಿಳಿಸಬೇಕು ಎಂದು ಕರೆ ನೀಡಿದ್ದಾರೆ.ಕೃಷಿ ಮಸೂದೆ ಬಗ್ಗೆ ಹಬ್ಬಿಸುತ್ತಿರುವ ವದಂತಿಗಳು ದೂರವಾಗಬೇಕು ಎಂದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel