Advertisement
ಕೃಷಿ

ಕೃಷಿ ಮಸೂದೆಗಳಿಂದ ಕೃಷಿಕರಿಗೆ ಹೆಚ್ಚಿನ ಅನುಕೂಲ | ಅಖಿಲ ಭಾರತ ರೈತ ಸಂಘಟನೆಗಳ ಒಕ್ಕೂಟ

Share
ಕೇಂದ್ರ ಸರ್ಕಾರ ಹೊಸದಾಗಿ ಮಂಡನೆ ಮಾಡಿರುವ ಕೃಷಿ ಮಸೂದೆಗಳಿಂದ ಕೃಷಿಕರಿಗೆ ಹೆಚ್ಚಿನ ಅನುಕೂಲ ಆಗಲಿದೆ ಎಂದು ಅಖಿಲ ಭಾರತ ರೈತ ಸಂಘಟನೆಗಳ ಒಕ್ಕೂಟ ಹೇಳಿದೆ.

ಈ ಕಾಯ್ದೆಯ ಮೂಲಕ ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಮುಕ್ತ ಸ್ವಾತಂತ್ರ್ಯ ಕಲ್ಪಿಸಲಾಗಿದೆ. ರಾಜ್ಯದ ಗಡಿಯಾಚೆಗೂ ಸುಲಭವಾಗಿ, ಯಾವುದೇ ನಿಬಂಧನೆಗಳು ಇಲ್ಲದೆಯೇ ತಮ್ಮ ಬೆಳೆಗಳನ್ನು ಮಾರಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ತಮ್ಮ ಉತ್ಪನ್ನಗಳ ಮಾರಾಟಗಾರರು ತಾವೇ ಆಗಲು ಅವಕಾಶ ಕಲ್ಪಿಸಿದೆ ಎಂದು ಒಕ್ಕೂಟ ತಿಳಿಸಿದೆ.

ಈ ಹೊಸ ಕೃಷಿ ಕಾಯ್ದೆಗಳ ಮೂಲಕ ಕೇಂದ್ರ ಸರ್ಕಾರ ರೈತರ ಸಬಲೀಕರಣಕ್ಕೆ ಮುಂದಾಗಿದೆ. ಈ ಮಸೂದೆ ರೈತರ ಆದಾಯ ಹೆಚ್ಚಳಕ್ಕೂ ಸಹಕಾರಿಯಾಗಲಿದೆ. ಈ ಎರಡು ಹೊಸ ಮಸೂದೆಗಳು ರೈತರ ಅಭಿವೃದ್ಧಿ‌ಗೆ ಸುಸ್ಥಿರ ಮತ್ತು ಲಾಭದಾಯಕ ಭವಿಷ್ಯವನ್ನು ಖಾತರಿಪಡಿಸುತ್ತದೆ ಎಂದೂ ಒಕ್ಕೂಟ ಅಭಿಪ್ರಾಯ ವ್ಯಕ್ತಪಡಿಸಿದೆ.

ರೈತರು ತಮ್ಮ ಉತ್ಪನ್ನಗಳ ಮೇಲೆ ತಾವೇ ನಿಯಂತ್ರಣ ಹೊಂದಲಿದ್ದಾರೆ. ರಾಜ್ಯ, ಅಂತರರಾಜ್ಯ‌ಗಳಲ್ಲಿ ತಮ್ಮಿಷ್ಟದ ಪ್ರಕಾರವೇ ಖರೀದಿ ಮತ್ತು ಮಾರಾಟ ಮಾಡಲು ಅವಕಾಶ ದೊರೆತಂತಾಗಿದೆ. ರೈತರ ವಿಚಾರದಲ್ಲಿ ಕೇಂದ್ರ ಸರ್ಕಾರದ ಈ ನಿಲುವು ದೂರದೃಷ್ಟಿಯುಳ್ಳದ್ದಾಗಿದೆ ಎಂದು  ಒಕ್ಕೂಟದ ಅಧ್ಯಕ್ಷ ಬಿ.ವಿ. ಜವರೇಗೌಡ  ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

3 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

3 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

3 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

3 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

20 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

1 day ago